ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ ಒತ್ತುವರಿದಾರರ ರಕ್ಷಣೆ: ಈಶ್ವರ ಖಂಡ್ರೆ

Published 23 ಜನವರಿ 2024, 21:58 IST
Last Updated 23 ಜನವರಿ 2024, 21:58 IST
ಅಕ್ಷರ ಗಾತ್ರ

ಮೈಸೂರು: ‘ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ’ ಎಂದು ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಜಲದರ್ಶಿನಿ ಅತಿಥಿಗೃಹದಲ್ಲಿ ಅಖಂಡ ಕರ್ನಾಟಕ ರೈತ ಒಕ್ಕೂಟದ ಸದಸ್ಯರಿಂದ ಮನವಿ ಸ್ವೀಕರಿಸಿ ಮಾತನಾಡಿ, ‘ಕೆಲವರು ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಅರಣ್ಯ ಒತ್ತುವರಿ ಮಾಡಿದ್ದು, ಅಂತಹವರ ವಿರುದ್ಧ ಕ್ರಮ ವಹಿಸಲಾಗುವುದು. ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆ ಸರ್ಕಾರದ ಹೊಣೆ. ಅರಣ್ಯ ಭೂಮಿ ಕ್ಷೀಣಿಸಿದರೆ ಮಾನವ- ವನ್ಯಜೀವಿ ಸಂಘರ್ಷ ಹೆಚ್ಚುತ್ತದೆ ಹೀಗಾಗಿ ಸಂರಕ್ಷಣೆ ಜನರ ಕರ್ತವ್ಯವೂ ಆಗಿದೆ’ ಎಂದರು.

ಹುಲಿ ದಾಳಿಯಿಂದ ಮೃತಪಟ್ಟವರ ಮನೆಗೆ ಭೇಟಿ: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಯಡಿಯಾಲದ ಬಳ್ಳೂರು ಹುಂಡಿ ಗ್ರಾಮದಲ್ಲಿ ಹುಲಿ ದಾಳಿಯಿಂದ ಮೃತಪಟ್ಟಿದ್ದ ರತ್ನಮ್ಮ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಶಾಸಕರಾದ ದರ್ಶನ್ ಧ್ರುವನಾರಾಯಣ್ ಮತ್ತು ಗಣೇಶ್ ಪ್ರಸಾದ್ ಇದ್ದರು.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಪ್ರಾಣಿಗಳು ಹೊರಗೆ ಬರದಂತೆ ತಡೆಯಲು ಹೆಡಿಯಾಲ ವ್ಯಾಪ್ತಿಯ ಸುತ್ತಲೂ ನಿರ್ಮಿಸಲಾದ ರೈಲು ಬ್ಯಾರಿಕೇಡ್‌ಗಳನ್ನು ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT