ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಶಾಲನಗರ | ಪ್ರಭಾಕರ್‌ ಭಟ್‌ ವಿರುದ್ಧ ಕ್ರಮಕ್ಕೆ ಆಗ್ರಹ

Published 27 ಡಿಸೆಂಬರ್ 2023, 12:55 IST
Last Updated 27 ಡಿಸೆಂಬರ್ 2023, 12:55 IST
ಅಕ್ಷರ ಗಾತ್ರ

ಕುಶಾಲನಗರ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ‌ ಪ್ರಭಾಕರ್ ಭಟ್‌ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ಮುಸ್ಲಿಂ ಒಕ್ಕೂಟದ ಕಾರ್ಯಕರ್ತರು ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬುಧವಾರ ಪ್ರತಿಭಟಿಸಿದರು.

ಕಾರ್ಯಕರ್ತರು ಕಲ್ಲಡ್ಕ ಪ್ರಭಾಕರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ಅಧ್ಯಕ್ಷ ಈ.ಕೆ.ಅಬ್ದುಲ್ ಕಲೀಂ ಮಾತನಾಡಿ, ‘ಮಂಡ್ಯದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ ಭಟ್ ಮುಸ್ಲಿಂ ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಬೇಕು. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು’ ಎಂದರು.

‘ದೇಶದಲ್ಲಿ ಹಿಂದೂ ಮುಸಲ್ಮಾನರು ಪರಸ್ಪರ ಶಾಂತಿ, ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕಲ್ಲಡ್ಕ ಪ್ರಭಾಕರ್ ಭಟ್‌ ಸಮಾಜದಲ್ಲಿ ದ್ವೇಷ ಬಿತ್ತುವ ಉದ್ದೇಶದಿಂದ ಈ ರೀತಿಯ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್.ಡಿ.ಪಿ.ಐ ಅಧ್ಯಕ್ಷ ಜಕರಿಯಾ ಮಾತನಾಡಿ, ‘ಪ್ರಬಾಕರ್ ಭಟ್‌ ಮುಸ್ಲಿಂ ಮಹಿಳೆಯರ ಬಗ್ಗೆ ತುಚ್ಚವಾಗಿ ಮಾತಾಡಿದ್ದಾರೆ. ಇಂತಹ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಲ್ಲೂಕು ಮುಸ್ಲಿಂ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಜಮೀರ್, ಉಪಾಧ್ಯಕ್ಷ ಪಾಷ, ದಂಡಿನಪೇಟೆ ಮಸೀದಿ ಅಧ್ಯಕ್ಷ ಶಬ್ಬೀರ್ ಪಾಷ, ಮುಖಂಡರಾದ ಅನ್ವರ್,‌ ಅಕ್ಬರ್, ಖಲೀರ್, ಶರೀಫ್, ಸಲೀಂ, ಮೊಯ್ದೀನ್, ಸಮಿ, ಅಶ್ರಫ್, ಜ಼ರೀನಾ, ಹಮೀದ್, ಸಾಹುಲ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT