ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಗೊಳಿಸಲು ಆಗ್ರಹಿಸಿ ರಂಗಾಯಣದ ಮುಂದೆ ಮಂಗಳವಾರ ಪ್ರತಿಭಟನೆ ಮುಂದುವರಿದಿದೆ.

ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹವ್ಯಾಸಿ ರಂಗಕರ್ಮಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದರು.

ಸರ್ಕಾರ ಕಾರ್ಯಪ್ಪ ಅವರನ್ನು ವಜಾಗೊಳಿಸುವವರೆಗೂ ಪ್ರತಿಭಟನೆ ಮುಂದುವರಿಸಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ರಂಗಾಯಣದ ಗೇಟ್ ನ್ನು ಮುಚ್ಚಿರುವುದಕ್ಕೆ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.