ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಲ್ಕ ಪಾವತಿಗೆ ಒತ್ತಡ ಸಲ್ಲದು: ಎಸ್‌ಎಫ್‌ಐ

Published 24 ಮೇ 2023, 5:13 IST
Last Updated 24 ಮೇ 2023, 5:13 IST
ಅಕ್ಷರ ಗಾತ್ರ

ಮೈಸೂರು: ‘ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ದಾಖಲಾತಿ ಸಮಯದಲ್ಲಿ ಶುಲ್ಕ ಪಾವತಿಸುವಂತೆ ಒತ್ತಡ ಹಾಕಬಾರದು’ ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟಿಸಿದರು.

ಫೆಡರೇಷನ್‌ ಜಿಲ್ಲಾಧ್ಯಕ್ಷ ವಿಜಯ್‌ ಕುಮಾರ್‌ ಮಾತನಾಡಿ, ‘ವಿದ್ಯಾರ್ಥಿ ವೇತನ ಬಂದ ಬಳಿಕ 7 ದಿನಗಳೊಳಗೆ ಶುಲ್ಕ ಪಾವತಿ ಮಾಡಬೇಕು ಎಂದು ಸರ್ಕಾರದ ಆದೇಶವಿದೆ. ಆದರೆ, ಅರ್ಹತೆ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ದಾಖಲಾತಿ ನೀಡುತ್ತಿಲ್ಲ.‘ ಎಂದರು.

‘ಎಸ್‌ಎಸ್‌ಪಿ ಜಾರಿಗೆ ಬರುವ ಮೊದಲು ವಿದ್ಯಾರ್ಥಿ ವೇತನ ನೇರವಾಗಿ ಕಾಲೇಜು ಆಡಳಿತ ಮಂಡಳಿಗೆ ಪಾವತಿ ಆಗುತ್ತಿತ್ತು. ಇದರಿಂದ ಶುಲ್ಕ ಪಾವತಿ ಮಾಡುವಂತೆ ಒತ್ತಾಯ ಮಾಡುತ್ತಿರಲಿಲ್ಲ. ಆದರೆ, ಈಗ ಡಿಬಿಟಿ ಮೂಲಕ ವಿದ್ಯಾರ್ಥಿಗಳಿಗೆ ನೇರವಾಗಿ ವಿದ್ಯಾರ್ಥಿ ವೇತನ ತಲುಪುವುದರಿಂದ ದಾಖಲಾತಿ ವೇಳೆ ಶುಲ್ಕ ಪಾವತಿಗೆ ಒತ್ತಾಯಿಸುತ್ತಿದ್ದಾರೆ. ಪ್ರಥಮ ವರ್ಷದ ಪದವಿ ದಾಖಲಾತಿ ಆರಂಭವಾಗಿದೆ. ಹೀಗಾಗಿ ಶುಲ್ಕ ಪಾವತಿ ಸಾಧ್ಯವಾಗದವರು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT