ಮೈಸೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡಿಸಿ ವಿಜಯನಗರ ನಿವಾಸಿ ಕಾರ್ತಿಕ್ ಎಂಬುವರು ಭಾನುವಾರ ಏಕಾಂಗಿ ಪ್ರತಿಭಟನೆ ನಡೆಸಿದರು.

ನಗರದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಮುಂದೆ, ‘ಭಯೋತ್ಪಾದನೆ ವಿರುದ್ಧ ಪ್ರತಿಭಟಿಸಿ, ಭಾರತದಲ್ಲಿ ಭಾರತೀಯರಿಗೆ ರಕ್ಷಣೆ ಎಲ್ಲಿ’ ಎಂಬ ಭಿತ್ತಿ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮಾತನಾಡಿ, ‘ಎಲ್ಲ ನಾಗರಿಕರು ಪ್ರತಿಭಟಿಸುವ ಮೂಲಕ ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಸಂದೇಶವನ್ನು ಸಾರಬೇಕಿತ್ತು. ಐಪಿಎಲ್ ಕ್ರಿಕೆಟ್ ಪಂದ್ಯಗಳನ್ನು ನೋಡಿಕೊಂಡು ಸುಮ್ಮನಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿಭಟಿಸುತ್ತಿರುವೆ’ ಎಂದರು.

‘ಕಾಶ್ಮೀರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ. ಸರ್ಕಾರವು ಪ್ರವಾಸಿಗರಿಗೆ ಭದ್ರತೆ ಕೊಡಬೇಕಿತ್ತು. ಕೃತ್ಯಕ್ಕೆ ಸಹಕರಿಸಿದವರಿಗೆ ತಕ್ಕ ಶಿಕ್ಷೆ ಆಗಬೇಕು. ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ತಳೆದಿರುವ ನಿರ್ಧಾರಗಳು ಸ್ವಾಗತಾರ್ಹ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.