ಮೈಸೂರು: ಒಂದೇ ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಕಾರ್ಯಕರ್ತರು ಒತ್ತಾಯಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಕೆಲಕಾಲ ಪ್ರತಿಭಟನೆ ನಡೆಸಿದ ಅವರು, ನಂತರ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಫಾರ್ಮಸಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಳೆದ ಸೆಮಿಸ್ಟರ್‌ನ ಪರೀಕ್ಷೆಯನ್ನು ಅನಗತ್ಯವಾಗಿ ನಡೆಸುವ ಬದಲು, ಆಂತರಿಕ ಮೌಲ್ಯಮಾಪನ ಅಥವಾ ಇನ್ನಾವುದಾದರೂ ವೈಜ್ಞಾನಿಕ ಮಾನದಂಡದ ಮೂಲಕ ಮೌಲ್ಯಮಾಪನ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಕಳೆದ ಒಂದು ವಾರದಿಂದ ನಡೆದ ‘ಗೂಗಲ್ ಫಾರ್ಮ್’ ಸಮೀಕ್ಷೆಯಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು, ಕಳೆದ ಸೆಮಿಸ್ಟರ್ ಪರೀಕ್ಷೆಯನ್ನು ಪ್ರಚಲಿತ ಸೆಮಿಸ್ಟರ್ ನಡುವೆ ನಡೆಸುವುದು ಬೇಡ ಎಂಬ ಅಭಿಪ್ರಾಯ ಮಂಡಿಸಿದ್ದಾರೆ. ಇದನ್ನು ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು.

ಶಿಕ್ಷಣ ತಜ್ಞರು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಪ್ರಜಾತಾಂತ್ರಿಕ ಚರ್ಚೆಗಳನ್ನು ನಡೆಸಿ ಶೈಕ್ಷಣಿಕ ವೇಳಾಪಟ್ಟಿ, ಪರೀಕ್ಷೆ, ಮೌಲ್ಯಮಾಪನಗಳ ಕುರಿತು ಒಂದು ವೈಜ್ಞಾನಿಕ ಪ್ರಜಾತಾಂತ್ರಿಕ ನೀತಿಯನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.

ಆಫ್‌ಲೈನ್ ತರಗತಿಗಳು ಆರಂಭವಾಗುವ ಮುನ್ನ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ವ್ಯಾಕ್ಸಿನ್ ನೀಡಬೇಕು ಎಂದು ಅವರು ಮನವಿ ಮಾಡಿದರು.

ಸಂಘಟನೆಯ ಅಧ್ಯಕ್ಷರಾದ ಬಿ.ಜೆ.ಸುಭಾಷ್, ಉಪಾಧ್ಯಕ್ಷರಾದ ಆಸಿಯ ಬೇಗಂ, ಸದಸ್ಯರಾದ ನಿತಿನ್, ಸಂತೋಷ್, ಸ್ವಾತಿ, ಮನಮೋಹನ್, ರಾಜು, ಪ್ರಶಾಂತಿ ಶೋಬನ್, ರಾಜೇಶ್, ಪ್ರಶಾಂತಿ ಶಿವಕುಮಾರ್ ಹಾಗೂ ವಿದ್ಯಾರ್ಥಿಗಳಾದ ನಿರಂಜನ್, ಗಣೇಶ್, ಸೇವಂತ್, ಚೇತನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.