ಮೈಸೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಮಾದಿಗ ವಿವಿಧ ಸಂಘಟನೆಗಳ ಒಕ್ಕೂಟದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು, ‘ರಾಜ್ಯ ಸರ್ಕಾರವು ನೊಂದ ಸಮುದಾಯಗಳು ನಡೆಸಿಕೊಂಡು ಬಂದಿರುವ ಅವಿಶ್ರಾಂತ ಸಂಘರ್ಷ ಕೊನೆಗೊಳಿಸಬೇಕು’ ಎಂದು ಆಗ್ರಹಿಸಿದರು.

ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ರಾಜಣ್ಣ ಮಾತನಾಡಿ, ‘ಒಳಮೀಸಲಾತಿ ವಿಚಾರದಲ್ಲಿ ಅಸ್ಪಷ್ಟ ತೀರ್ಮಾನವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಇಲ್ಲದ ತೊಡಕು ರಾಜ್ಯದಲ್ಲೇಕೇ ಸೃಷ್ಟಿಯಾಗಿದೆ. ಸಮಸ್ಯೆಯನ್ನು ಕೂಡಲೇ ಬಗೆಹರಿಸಿ ನ್ಯಾ.ನಾಗಮೋಹನ್ ದಾಸ್ ಶಿಫಾರಸಿನಂತೆ ಒಳಮೀಸಲಾತಿ ಜಾರಿಗೆ ಮುಂದಾಗಬೇಕು. ಸರ್ಕಾರಿ ಹುದ್ದೆಗಳ ನೇಮಕಾತಿಗೆ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು’ ಎಂದರು.

ಸಂಚಾಲಕ ಎನ್.ಸ್ವಾಮಿ, ಮುಖಂಡರಾದ ವೆಂಕಟರಾಮು, ಹನುಮಂತಯ್ಯ, ಮಹದೇವ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.