ಮೈಸೂರು: ಬೌನ್ಸರ್ ಹೊಡೆದ ಏಟಿನಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಹೇಳಿದ್ದಾರೆ. ಈ ಕೂಡಲೇ ಅವರು ಕ್ಷಮೆ ಯಾಚಿಸಬೇಕು ಇಲ್ಲವೇ ಈ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಒತ್ತಾಯಿಸಿದರು. ಇಲ್ಲದಿದ್ದರೆ ರಂಗಾಯಣದ ಆವರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರ ಅಣಕು ಶವಯಾತ್ರೆ ನಡೆಸಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸತ್ತವರನ್ನು ಕುರಿತು ಹೀನಾಯವಾಗಿ ಮಾತನಾಡಿ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವುದು ನಾಚಿಕೆಗೇಡು. ರಾಕೇಶ್ ಅಭಿಮಾನಿಗಳು ಕಾರ್ಯಪ್ಪ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತಾರೆ ಎಂದು ಎಚ್ಚರಿಸಿದರು.

ಸಂಸ್ಕೃತಿ, ಶಿಸ್ತಿಗೆ ಹೆಸರಾಗಿರುವ ಆರ್ ಎಸ್ ಎಸ್ ಕೂಡಲೇ ಕಾರ್ಯಪ್ಪ ಅವರನ್ನು ನಿಯಂತ್ರಿಸಬೇಕು. ಅಸಂಸ್ಕೃತಿಯ ಹೇಳಿಕೆ ನೀಡುವ ಮೂಲಕ ಆರ್ ಎಸ್ ಎಸ್ ಗೆ ಕಾರ್ಯಪ್ಪ ಕಳಂಕ ತಂದಿದ್ದಾರೆ ಎಂದು ಹೇಳಿದರು.

ಕಾರ್ಯಪ್ಪ ಅವರು ಹಿಂದೆ ಜೈಲಿಗೆ ಹೋಗಿದ್ದು ಏಕೆ ಎಂಬುದನ್ನು ಅವರು ಬಹಿರಂಗಪಡಿಸಬೇಕು. ಗಾಜಿನ ಮನೆಯಲ್ಲಿ ಕುಳಿತು ಕಲ್ಲೆಸೆಯುವ ಪ್ರವೃತ್ತಿಯನ್ನು ಇನ್ನಾದರೂ ಬಿಡಬೇಕು ಎಂದರು.

ತಾಯಿ ಕುರಿತ ಬಹುರೂಪಿ ರಂಗೋತ್ಸವದಲ್ಲಿಹಿರೇಮಗಳೂರು ಕಣ್ಣನ್ ಮಹಿಳೆಯರನ್ನು ಕುರಿತು ಕೀಳಾಗಿ ಮಾತನಾಡಿರುವುದು ಸರಿಯಲ್ಲ. ಅವರು ಅಸಹ್ಯ ತರುವ ಹಾಗೂ ಸಮಾಜವನ್ನು ಕುಲಗೆಡಿಸುವ ಹೇಳಿಕೆ ನೀಡಿದ್ದಾರೆ. ನಿಜಕ್ಕೂ ಇವರು ಸಂಸ್ಕೃತಿ ಚಿಂತಕರೆ? ಎಂದು ಪ್ರಶ್ನಿಸಿದರು.

ಬೌನ್ಸರ್ ಹೊಡೆದ ಏಟಿನಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಹೇಳಿದ್ದಾರೆ. ಈ ಕೂಡಲೇ ಅವರು ಕ್ಷಮೆ ಯಾಚಿಸಬೇಕು ಇಲ್ಲವೇ ಈ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಒತ್ತಾಯಿಸಿದರು.

ಇಲ್ಲದಿದ್ದರೆ ರಂಗಾಯಣದ ಆವರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರ ಅಣಕು ಶವಯಾತ್ರೆ ನಡೆಸಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.