ಕೆ.ಆರ್.ನಗರ: ‘ಕ್ಷೇತ್ರದ ಜನತೆ ನನ್ನ ಮೇಲೆ ನಂಬಿಕೆಯಿಟ್ಟು ನೀಡಿರುವ ಅಧಿಕಾರವನ್ನು ಸಾರ್ವಜನಿಕರ ಸೇವೆಗೆ ಮುಡುಪಾಗಿಟ್ಟಿದ್ದೇನೆ’ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಇಲ್ಲಿನ ಹಾಸನ–ಮೈಸೂರು ರಸ್ತೆಯಲ್ಲಿನ ಶಾಸಕರ ಕಚೇರಿಯಲ್ಲಿ ಬುಧವಾರ ನಡೆದ ಜನ ಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

‘ಅಧಿಕಾರಿಗಳು ಜನರನ್ನು ಕಚೇರಿಗಳಿಗೆ ಅಲೆಸುವುದನ್ನು ತಪ್ಪಿಸಲು ಈ ಕಾರ್ಯ ಮಾಡುತ್ತಿದ್ದೇನೆ. ಈಗಾಗಲೇ ಕಾವೇರಿ ನದಿಯಿಂದ ಕ್ಷೇತ್ರದ ವ್ಯಾಪ್ತಿಯ ನಾಲೆಗಳಿಗೆ ನೀರು ಬಿಡಲಾಗಿದೆ, ಹರಿಬಿಟ್ಟ ನೀರು ನಾಲೆಯ ಕೊನೆಯ ಭಾಗಕ್ಕೂ ತಲುಪಬೇಕು, ಅಧಿಕಾರಿಗಳು ಈ ಬಗ್ಗೆ ಗಮನಿಸಬೇಕು’ ಎಂದರು.

‘ಅಗತ್ಯ ಇರುವ ಕಡೆ ನಾಲೆಗಳಲ್ಲಿನ ಹೂಳು ತೆಗೆಸಲಾಗಿದೆ. ರೈತರಿಗೆ ಬಿತ್ತನೆ ಬೀಜ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಈಚೆಗೆ ಶಂಕುಸ್ಥಾಪನೆಗೊಂಡ ಕಾಮಗಾರಿಗಳು ಪ್ರಾರಂಭಗೊಂಡಿವೆ’ ಎಂದು ಮಾಹಿತಿ ನೀಡಿದರು.

ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಮತ್ತಷ್ಟು ಅನುದಾನ ತಂದು ಕೆಲಸ ಮಾಡಿಸುವುದಾಗಿ ಹೇಳಿದ ಶಾಸಕರು, ಸಾರ್ವಜನಿಕರ ಕೆಲಸ ಮಾಡುವಾಗ ನಾನು ಜಾತಿ ಅಥವಾ ಪಕ್ಷ ಭೇದ ಮಾಡುವುದಿಲ್ಲ ಎಂದರು. ಕ್ಷೇತ್ರದ ವಿವಿಧ ಬಾಗಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಉದಯಶಂಕರ್, ಎಂ.ಎಸ್.ಮಹದೇವ್, ಕಾಂಗ್ರೆಸ್ ವಕ್ತಾರ ಸಯ್ಯದ್ ಜಾಬೀರ್, ಪುರಸಭೆ ಸದಸ್ಯ ಕೋಳಿ ಪ್ರಕಾಶ್, ಮುಖಂಡ ಅಸ್ಲಂ, ಹಂಪಾಪುರ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಚ್.ಎಂ.ಅನಂತ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.