ಉಚಿತ ಪ್ರಯಾಣ ಕೈಗೊಂಡ ಮಹಿಳಾ ಪ್ರಯಾಣಿಕರಿಗೆ ಸಿಹಿ ವಿತರಿಸಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಜನರ ಅಭಿಪ್ರಾಯ ಪಡೆದರು. ಈ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ ಪುಷ್ಪಾ, ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ, ಎಂಟು ತಿಂಗಳು ಕಳೆದಿದೆ. ಎಲ್ಲ ಮಹಿಳೆಯರು ಖುಷಿಯಿಂದ ಶಕ್ತಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ತವರು ಮನೆ ಸೇರಿದಂತೆ ಬೇರೆ ಬೇರೆ ಕಡೆ ಪ್ರಯಾಣ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಯಾಣಿಕರಿಗೆ ಮತ್ತಷ್ಟು ಬಸ್‌ಗಳ ವ್ಯವಸ್ಥೆ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ’ ಎಂದರು.