ಮೈಸೂರು: ‘ಸಮುದಾಯವನ್ನು ಸಂಘಟಿಸುವ ಕೆಲಸದಲ್ಲಿ ಸಮಿತಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕಿದೆ’ ಎಂದು ಕಾಯಕ ಸಮಾಜ ಒಕ್ಕೂಟದ ರಾಜ್ಯ ಅಧ್ಯಕ್ಷ ಪುಟ್ಟಸಿದ್ದಶೆಟ್ಟಿ ಹೇಳಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಸೋಮವಾರ ಜಿಲ್ಲಾ ಕಾಯಕ ಸಮಾಜಗಳ ಒಕ್ಕೂಟವು ಆಯೋಜಿಸಿದ್ದ ತ್ರಿಪದಿ ಕವಿ ಸರ್ವಜ್ಞ ನೆನಪಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇತ್ತೀಚಿನ ದಿನಗಳಲ್ಲಿ ಸಮುದಾಯಗಳಲ್ಲಿ ಒಗ್ಗಟ್ಟಿನ ಕೊರತೆ ಕಾಡುತ್ತಿದೆ. ಎಲ್ಲ ಭೇದಗಳನ್ನು ಮರೆತು, ಕಲ್ಯಾಣಕ್ಕಾಗಿ ಎಲ್ಲರೂ ಒಂದಾಗಬೇಕು’ ಎಂದು ಸಲಹೆ ನೀಡಿದರು.

‘ಸರ್ವಜ್ಞ ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ಇಡೀ ಜಗತ್ತಿಗೆ ಉತ್ತಮ ಸಂದೇಶಗಳನ್ನು ನೀಡಿದ ಕವಿ. ಸಮ ಸಮಾಜ ನಿರ್ಮಾಣಕ್ಕಾಗಿ ತಮ್ಮ ವಚನಗಳ ಮೂಲಕ ಸಂದೇಶ ನೀಡಿದ್ದಾರೆ’ ಎಂದು ಹೇಳಿದರು.

ಮುಖಂಡರಾದ ಬೋರಪ್ಪ ಶೆಟ್ಟಿ, ಸುಬ್ಬಶೆಟ್ಟಿ, ಪುಟ್ಟಣ್ಣಯ್ಯ, ಪ್ರಕಾಶ್ ಸೋಮಶೆಟ್ಟಿ, ಲೋಕೇಶ್, ರಾಮಶೆಟ್ಟಿ, ಕುವಾರಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.