ಭಾನುವಾರ, ನವೆಂಬರ್ 27, 2022
26 °C

ಮೈಸೂರಿನಿಂದ ಮಂಡ್ಯದತ್ತ ಭಾರತ್ ಜೋಡೊ ಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯು ರಾಜ್ಯದಲ್ಲಿ ನಾಲ್ಕನೇ‌ ದಿನವಾದ ಸೋಮವಾರ ಮೈಸೂರಿನಿಂದ ಮಂಡ್ಯದತ್ತ ಸಾಗುತ್ತಿದೆ.

ಮೈಸೂರು ನಗರದ ಹಾರ್ಡಿಂಜ್ ವೃತ್ತದ ಬಳಿ ಪಾದಯಾತ್ರೆ ಆರಂಭವಾಯಿತು. ನಾಯಕರ ಜೊತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ರಾಹುಲ್ ಹಾಗೂ ನಾಯಕರು ನಗುವನಹಳ್ಳಿ ಗೇಟ್ ಬಳಿ ಕಸ್ತೂರಿ ನಿವಾಸ ಹೋಟೆಲ್‌ನಲ್ಲಿ ಉಪಾಹಾರ ಸೇವಿಸಿದರು.
ಕೆಪಿಸಿಸಿ ಅಧ್ಯಕ್ಷ ‌ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ‌ಪಕ್ಷದ ನಾಯಕ ಸಿದ್ದರಾಮಯ್ಯ ಮೊದಲಾದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು