ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ಅಂಧ ಮಹಿಳೆಯ ಮೇಲೆ ಅತ್ಯಾಚಾರ: 10 ವರ್ಷ ಶಿಕ್ಷೆ

Published 18 ಜೂನ್ 2024, 14:23 IST
Last Updated 18 ಜೂನ್ 2024, 14:23 IST
ಅಕ್ಷರ ಗಾತ್ರ

ಮೈಸೂರು: ಅಂಧ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದರಿಂದ, ಹುಣಸೂರು ತಾಲ್ಲೂಕಿನ ಬಿಳಿಕೆರೆಯ ಕೊಮ್ಮೇಗೌಡನ ಕೊಪ್ಪಲಿನ ನಿವಾಸಿ ಚಲುವರಾಯ (50) ಎಂಬಾತನಿಗೆ 7ನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

‘2019ರ ಆಗಸ್ಟ್‌ 16ರಂದು ಕೊಮ್ಮೇಗೌಡನ ಕೊಪ್ಪಲಿನಲ್ಲಿ ಒಂಟಿಯಾಗಿ ವಾಸವಿದ್ದ ಅಂಧ ಮಹಿಳೆಯೊಬ್ಬರ ಮನೆಗೆ ನುಗ್ಗಿದ್ದ ಅಪರಾಧಿಯು‌, ಆಕೆಯ ಬಾಯಿಗೆ ಬಟ್ಟೆ ತುರುಕಿ, ಕತ್ತು ಹಿಸುಕಿ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿಷಯವನ್ನು ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ’ ಎಂದು ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಂದಿನ ಇನ್‌ಸ್ಪೆಕ್ಟರ್‌ ಕೆ.ಸಿ.ಪೂವಯ್ಯ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆಯಲ್ಲಿ ಚಲುವರಾಯ ಅಪರಾಧಿಯೆಂದು ಸಾಬೀತಾಗಿದ್ದರಿಂದ ನ್ಯಾಯಾಧೀಶ ಎಂ.ರಮೇಶ್‌ ಅವರು 10 ವರ್ಷ ಕಠಿಣ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದರು. ಸರ್ಕಾರದ ಪರವಾಗಿ ಕೆ.ನಾಗರಾಜ್‌ ವಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT