ಮೈಸೂರು: ‘ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಬೇಕು ಮತ್ತು ಅವುಗಳನ್ನು ರದ್ದುಪಡಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಇಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ‘ಕೆಪಿಟಿಸಿಎಲ್ನಿಂದ ಬಾಕಿ ಇರುವ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಎಲ್ಲಾ ಯೋಜನೆಗಳ ಕಾರ್ಯಾದೇಶವನ್ನು ನವೆಂಬರ್ ಅಂತ್ಯದೊಳಗೆ ನೀಡಬೇಕು’ ಎಂದು ನಿರ್ದೇಶನ ನೀಡಿದರು.

‘ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿ ತಕ್ಷಣವೇ ಕೈಗೊಳ್ಳಬೇಕು. ನಗರದಲ್ಲಿ ‘ವೈಟ್ಟ್ಯಾಪಿಂಗ್’ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು’ ಎಂದು ಸೂಚಿಸಿದರು.

‘ಏಳೂವರೆ ವರ್ಷ ನಾನು ಮುಖ್ಯಮಂತ್ರಿಯಾಗಿ ಈ ಅವಧಿಯಲ್ಲಿ ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯಲು ಕೆಲಸ ಮಾಡಿದ್ದೇನೆ. ಅಧಿಕಾರಿಗಳೂ ಸಂವಿಧಾನಬದ್ಧವಾಗಿರಬೇಕು, ಜಾತ್ಯತೀತರಾಗಿರಬೇಕು. ಯಾವುದೇ ಪಕ್ಷದ ಪರವಾಗಿ, ಜಾತಿ-ಧರ್ಮದ ಪರವಾಗಿ ವರ್ತಿಸದೇ ವೃತ್ತಿಪರವಾಗಿ ಇರಬೇಕು’ ಎಂದು ತಿಳಿಸಿದರು.

‘ಸಮಾಜಮುಖಿ ಆಗಿರುವುದು ಹಾಗೂ ಸಂವಿಧಾನದ ಆಶಯಗಳನ್ನು ಈಡೇರಿಸುವುದು ನಮ್ಮ-ನಿಮ್ಮ ಗುರಿಯಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.