ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾನೂನು ಹೋರಾಟಕ್ಕೂ ಸಿದ್ಧ: ಸಿಎಂ ಸಿದ್ದರಾಮಯ್ಯ

‘ಬಿಜೆಪಿ– ಜೆಡಿಎಸ್‌ನವರ ಹಗರಣಗಳನ್ನೂ ಬಿಚ್ಚಿಡುವೆ l ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ
Published : 10 ಆಗಸ್ಟ್ 2024, 23:40 IST
Last Updated : 10 ಆಗಸ್ಟ್ 2024, 23:40 IST
ಫಾಲೋ ಮಾಡಿ
Comments

ಮೈಸೂರು: ‘ರಾಜಕೀಯ ಲಾಭಕ್ಕಾಗಿ ಬಿಜೆಪಿ, ಜೆಡಿಎಸ್‌ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ. ಅವರ ವಿರುದ್ಧ ರಾಜಕೀಯ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ಧವಾಗಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ‌, ‘ಮೈತ್ರಿ ಪಾದಯಾತ್ರೆಗೆ ಪ್ರತ್ಯುತ್ತರವಾಗಿ, ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಬೃಹತ್ ಜನಾಂದೋಲನ ಸಮಾವೇಶವನ್ನು ನಡೆಸಿದ್ದೇವೆ. ಪಾದಯಾತ್ರೆ ಮೂಲಕ ವಿರೋಧ ಪಕ್ಷಗಳು ನನಗೆ ಮಸಿ ಬಳಿಯಲು ಪ್ರಯತ್ನಿಸುತ್ತಿವೆ’ ಎಂದರು.

‘ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಆರ್. ಅಶೋಕ ಏನೇನು ಮಾಡಿದ್ದಾರೆಂದು ಗೊತ್ತಿದೆ. ಹಲವು ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ವರದಿ ಬಳಿಕ ಹೆಚ್ಚು ಮಾತನಾಡುತ್ತೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇನ್ನೂ ಕೆಲವು ಹಗರಣಗಳು ಬಾಕಿ ಇವೆ’ ಎಂದರು.

‘ಮುಖ್ಯಮಂತ್ರಿ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸುತ್ತೇವೆ’ ಎಂಬ ಬಿಜೆಪಿ–ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸುಳ್ಳು ಆರೋಪಗಳನ್ನು ಆಧರಿಸಿದ ಹೋರಾಟಗಳಿಗೆ ಹೆದರುವುದಿಲ್ಲ. ಅವರ ಹೋರಾಟದ ಸತ್ಯಾಸತ್ಯತೆಗಳು ತಿಳಿದಾಗ ಜನರೇ ಹತ್ತಿಕ್ಕುತ್ತಾರೆ’ ಎಂದರು.

ಬಳಿಕ ಅವರು, ‘ಶ್ರಾವಣ ಶನಿವಾರ’ ಅಂಗವಾಗಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಜತೆಗಿದ್ದರು. ಅದಕ್ಕೂ ಮುನ್ನ ತಮ್ಮ ನಿವಾಸದ ಬಳಿ, ಸಾರ್ವಜನಿಕರಿಂದ ಮನವಿ ಪತ್ರಗಳನ್ನು ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT