ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ 25 ಕಿಲೋಮೀಟರ್‌ಗೆ ತಂಗುದಾಣ

ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಗೆ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರ ವಿಶ್ವಾಸ
Last Updated 26 ಜೂನ್ 2018, 13:27 IST
ಅಕ್ಷರ ಗಾತ್ರ

ಮೈಸೂರು: ರಾಷ್ಟ್ರೀಯ ಪರವಾನಗಿ ಹೊಂದಿರುವ ಚಾಲಕರ ಅನುಕೂಲಕ್ಕಾಗಿ ಪ್ರತಿ 25 ಕಿಲೋಮೀಟರಿಗೊಂದು ತಂಗುದಾಣ ಸ್ಥಾಪಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಶಾಸಕ ಎಸ್‌.ಎ.ರಾಮದಾಸ್ ತಿಳಿಸಿದರು.

ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘವು ಮಂಗಳವಾರ ಹಮ್ಮಿಕೊಂಡಿದ್ದ 7ನೇ ವಾರ್ಷಿಕ ಸರ್ವಸದಸ್ಯರ ಸಭೆ ಹಾಗೂ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ಯೋಜನೆಗೆ ಪ್ರಧಾನಿ ಮೋದಿ ಒಪ್ಪಿಗೆ ನೀಡಿದ್ದಾರೆ. ಹೆದ್ದಾರಿಗಳಲ್ಲಿ ಸಂಚರಿಸುವ ಚಾಲಕರಿಗೆ ಸೂಕ್ತ ಸೌಲಭ್ಯಗಳಿಲ್ಲ. ಅವರಿಗೆ ವಿಶ್ರಾಂತಿ, ಉಪಾಹಾರ, ವೈದ್ಯಕೀಯ ಚಿಕಿತ್ಸೆಗೆ ಅವಕಾಶಗಳೇ ಇಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಶೀಘ್ರವೇ ಈ ಯೋಜನೆ ಜಾರಿಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ ವಾಹನ ಚಾಲಕರ ಅನುಕೂಲಕ್ಕಾಗಿ ರೂಪಿಸಿರುವ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯು ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರವಾಗಲಿದೆ. ಬ್ರಿಟಿಷರ ಕಾಲದ ಮೋಟಾರು ವಾಹನ ಕಾಯ್ದೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ನೀತಿ ರೂಪಿಸುತ್ತಿದೆ. ಈ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದರೂ ರಾಜ್ಯಸಭೆಯಲ್ಲಿ ಒಪ್ಪಿಗೆ ಸಿಕ್ಕಿರಲಿಲ್ಲ. ಇದೀಗ ಎಲ್ಲ ಸಂಸದರಿಗೂ ಮನವಿ ಮಾಡಲಾಗಿದ್ದು ಅಂಗೀಕಾರವಾಗುವ ವಿಶ್ವಾಸವಿದೆ ಹೇಳಿದರು.

ಪ್ರವಾಸಿಗಳಿಗೆ ಅನುಕೂಲವಾಗಲಿ:

ಮೈಸೂರಿಗೆ ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಅವರಿಗೆ ಅನುಕೂಲ ಕಲ್ಪಿಸಿಕೊಡಬೇಕು. ಹಾಗಾಗಿ, ಪ್ರವಾಸಿ ವಾಹನಗಳ ಚಾಲಕರ ಹಿತಕಾಯಬೇಕು ಎಂದರು.

ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು ಸನ್ಮಾನಿಸಲಾಯಿತು. ಸಂಘದ ಗೌರವಾಧ್ಯಕ್ಷ ಬಿ.ಎಸ್.ಪ್ರಶಾಂತ್, ಅಧ್ಯಕ್ಷ ಎಸ್.ನಾಗರಾಜು, ಮಾಜಿ ಅಧ್ಯಕ್ಷ ಜಯಕುಮಾರ್, ನಾಸಿರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT