ಮೈಸೂರು: ‘ಸಿದ್ದರಾಮಯ್ಯ ಅವರು ಮೊದಲು ತಮ್ಮ ಸ್ಥಾನವನ್ನು ಉಳಿಸಿ ಕೊಳ್ಳಲಿ. ಆ ಬಳಿಕ ಬಿಜೆಪಿ ಬಗ್ಗೆ ಮಾತ ನಾಡಲಿ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರನ್ನು ವಿಧಾನ ಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ದಿಂದ ಕೆಳಗಿಳಿಸಲು ಡಿ.ಕೆ.ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಿದ್ದರಾಮಯ್ಯ ತಂತ್ರ ಹೆಣೆಯುತ್ತಿದ್ದಾರೆ. ಈ ಕಚ್ಚಾಟವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಸೋಮ ವಾರ ಟೀಕಿಸಿದರು.

ಆರ್.ಆರ್.ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಬೇಕೆಂಬುದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣಗಳು ಕಾಯುತ್ತಿವೆ. ಸೋತ ಬಳಿಕ ಪರಸ್ಪರ ಒಬ್ಬರ ಮೇಲೊಬ್ಬರು ಆರೋಪ ಮಾಡಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆಯುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.