ಮೈಸೂರು: ‘ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೆಲವೊಂದಿಷ್ಟು ಗೊಂದಲಗಳು ಇದ್ದವು. ಅವುಗಳನ್ನು ಹೈಕಮಾಂಡ್ ಬಗೆಹರಿಸಿದೆ. ಮುಖ್ಯಮಂತ್ರಿ ಕುರ್ಚಿಯ ವಿಚಾರದಲ್ಲಿ ನಾವು ಮಾಧ್ಯಮದ ಮುಂದೆ ಮಾತನಾಡಬಾರದೆಂದು ಸೂಚಿಸಲಾಗಿದೆ’ ಎಂದರು.

‘ಒಂದಿಬ್ಬರು ಶಾಸಕರ ಹೇಳಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಯಾವ ಶಾಸಕರ ಬೆಂಬಲ ಯಾರಿಗೆ ಇದೆ ಎಂಬ ಪ್ರಶ್ನೆ ಈಗೇಕೆ ಬಂದಿತು ಎಂಬುದು ಗೊತ್ತಿಲ್ಲ. ಡಿ.ಕೆ. ಶಿವಕುಮಾರ್– ಸಿದ್ದರಾಮಯ್ಯ ಜೋಡೆತ್ತಿನ ರೀತಿ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತಂದಿದ್ದಾರೆ. ರಾಜಕಾರಣದಲ್ಲಿ ಎಲ್ಲರಿಗೂ ದೊಡ್ಡ ಹುದ್ದೆಯ ಆಸೆ ಇರುತ್ತದೆ. ಅಂತಿಮ ತೀರ್ಮಾನ ಹೈಕಮಾಂಡ್ಗೆ ಬಿಟ್ಟಿದ್ದು’ ಎಂದು ತಿಳಿಸಿದರು.

‘ಮೂರು ತಿಂಗಳಿಗೊಮ್ಮೆ ‘ಗೃಹಲಕ್ಷ್ಮಿ’ ಹಣ ಕೊಡುತ್ತಿದ್ದೇವೆ. ಕೆಲ ಕಾರಣದಿಂದ ₹ 1.20 ಲಕ್ಷ ಮಹಿಳೆಯರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಮಂದಿಯ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಉಳಿದವರ ಸಮಸ್ಯೆಯನ್ನೂ ಶೀಘ್ರದಲ್ಲೇ ಬಗೆಹರಿಸುತ್ತೇವೆ. ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ಕೊಡುವುದನ್ನು ನಾವು ನಿಲ್ಲಿಸಿಲ್ಲ. ಪ್ರತಿ ತಿಂಗಳೂ ನೀಡುವುದಕ್ಕೆ ಕೆಲವು ತೊಡಕುಗಳಿವೆ. ಹೀಗಾಗಿ ಕೊಡಲಾಗುತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.
.ಡಿಕೆಶಿ ಈಗಲ್ಲದಿದ್ದರೆ ಮುಂದೆ ಸಿಎಂ ಆಗುವುದಿಲ್ಲ: ಜೆಡಿಎಸ್ ಶಾಸಕ ಎ.ಮಂಜು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.