ಸಾಲಿಗ್ರಾಮ: ರೈತ ಸಮುದಾಯ ಬೆಳೆದಿರುವ ರಾಗಿ ಬೆಳೆಗೆ ಬೆಂಬಲ ಬೆಲೆ ನೀಡಿ ಹೋಬಳಿ ಕೇಂದ್ರಗಳಲ್ಲೇ ಖರೀದಿ ಕೇಂದ್ರಗಳನ್ನು ತೆರೆದು ಖರೀದಿಸಿದ ಕೆಲವೇ ದಿನಗಳಲ್ಲಿ ಹಣವನ್ನು ರೈತರ ಖಾತೆಗೆ ರಾಜ್ಯ ಸರ್ಕಾರ ಪಾವತಿ ಮಾಡುತ್ತಿದೆ. ಇಂತಹ ಕೇಂದ್ರಗಳಿಗೆ ರೈತರು ಗುಣಮಟ್ಟದ ರಾಗಿಯನ್ನು ಸರಬರಾಜು ಮಾಡಬೇಕು ಎಂದು ಸಾಲಿಗ್ರಾಮ ತಹಶೀಲ್ದಾರ್ ರುಕಿಯಾಬೇಗಂ ರೈತರಿಗೆ ಮನವಿ ಮಾಡಿದರು.

ಕಳೆದ ಎರಡು ದಿನಗಳಿಂದ ಸಾಲಿಗ್ರಾಮ, ಚುಂಚನಕಟ್ಟೆ ರಾಗಿ ಖರೀದಿ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗುಣಮಟ್ಟದ ರಾಗಿ ಖರೀದಿ ಮಾಡುತ್ತಿರುವ ಮೇರೆಗೆ ಕೆಲವು ರೈತರು ತಂದಿದ್ದ ರಾಗಿ ಗುಣಮಟ್ಟದಿಂದ ಇಲ್ಲದಿರುವ ಹಿನ್ನೆಲೆಯಲ್ಲಿ ಖರೀದಿ ಮಾಡದೆ ಪಾಪಸ್ ಕಳುಹಿಸಲಾಗುತ್ತಿತು. ಇದರಿಂದ ಕಂಗಾಲಾದ ರಾಗಿ ಬೆಳೆಗಾರರು ಮಂಗಳವಾರ ಬೆಳಿಗ್ಗೆ ಮಿರ್ಲೆ ಸಾಲಿಗ್ರಾಮ ರಸ್ತೆಯಲ್ಲಿ ಟ್ರ್ಯಾಕ್ಟರ್ಗಳನ್ನು ಅಡ್ಡ ನಿಲ್ಲಿಸಿ ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್ ರುಕಿಯಾ ಬೇಗಂ ಅವರು ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಖರೀದಿ ಅಧಿಕಾರಿ ರಂಜಿತಾ ಅವರಿಂದ ಮಾಹಿತಿ ಪಡೆಯುತ್ತಿರುವುದನ್ನು ತಿಳಿದು ರೈತರು ನಾವು ಬೆಳೆದ ರಾಗಿ ಖರೀದಿ ಮಾಡದೆ ನಮಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಮನವಿ ಮಾಡಿದರು. ಜಿಲ್ಲಾಧಿಕಾರಿ ಸೋಮವಾರ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ರಾಗಿ ಖರೀದಿ ಕೇಂದ್ರದ ಅಧಿಕಾರಿಗಳನ್ನು ಒಳಗೊಂಡಂತೆ ಸಭೆ ಮಾಡಿ ಕಡ್ಡಾಯವಾಗಿ ಗುಣಮಟ್ಟದ ರಾಗಿಯನ್ನು ಖರೀದಿ ಮಾಡಬೇಕು ಹಾಗೊಂದು ವೇಳೆ ಕಳಪೆ ರಾಗಿಯನ್ನು ಖರೀದಿ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಯಮಾನುಸಾರ ಕಟ್ಟು ನಿಟ್ಟಿನಿಂದ ರಾಗಿ ಖರೀದಿ ಮಾಡಲು ಮುಂದಾಗಿದ್ದಾರೆ. ಇದಕ್ಕೆ ರೈತ ಸಮುದಾಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಡಿಮೆ ತೇವಾಂಶ ಹಾಗೂ ಕಸ, ಕಡ್ಡಿ, ಕಲ್ಲು, ಮಣ್ಣು ಇಲ್ಲದ ರಾಗಿಯನ್ನು ಖರೀದಿ ಕೇಂದ್ರಕ್ಕೆ ತಂದು ರೈತರು ಮಾರಾಟ ಮಾಡಬೇಕು. ಕಳಪೆ ರಾಗಿ ತಂದರೆ ಖರೀದಿ ಕೇಂದ್ರದಲ್ಲೇ ಇರುವ ಕ್ಲೀನಿಂಗ್ ಯಂತ್ರದಲ್ಲಿ ಸ್ವಚ್ಛಗೊಳಿಸಿದ ನಂತರ ಖರೀದಿ ಮಾಡಲಾಗುತ್ತದೆ. ಇದಕ್ಕೆ ರಾಗಿ ಬೆಳೆಗಾರರು ಸಹಕಾರ ನೀಡಬೇಕು ಎಂದು ತಿಳಿಸಿದರು. ಇದಕ್ಕೆ ಒಪ್ಪಿದ ಬಹುತೇಕ ರಾಗಿ ಬೆಳೆಗಾರರು ತಾವು ತಂದಿದ್ದ ರಾಗಿಯನ್ನು ಸ್ವಚ್ಛ ಮಾಡಿಸಿದ ನಂತರ ಮಾರಾಟ ಮಾಡುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-38-2008757048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.