ಹುಣಸೂರು: ತಾಲ್ಲೂಕಿನ ಸಣ್ಣೇಗೌಡರ ಕಾಲೊನಿಯ ನಿವಾಸಿ ಗುರು ಎಂಬುವವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದಿದೆ.

ರಾಗಿ ಹೊಲದಲ್ಲಿ ಹಸು ಮೇಯುತ್ತಿದ್ದಾಗ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಭಕ್ಷಿಸಿದೆ. ಈ ಸಂಬಂಧ ಹುಣಸೂರು ಪ್ರಾದೇಶಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ನಂದಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಪರಿಹಾರಕ್ಕೆ ಶಿಫಾರಸು ಮಾಡಿದ್ದಾರೆ.

ಆತಂಕ: ಹುಲಿ ದಾಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅರಣ್ಯದಂಚಿನ ಗ್ರಾಮಸ್ಥರು ಬದುಕು ನಡೆಸುವುದು ಕಷ್ಟವಾಗಿದೆ. ಕೊಂಬಿಂಗ್ ನಡೆಸಿದರು ಹುಲಿ ಪತ್ತೆಯಾಗದೆ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಬೆಂಕಿಪುರ ಚಿಕ್ಕಣ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.