ಸರಗೂರು: ಪಟ್ಟಣದ 5ನೇ ವಾರ್ಡ್ನಲ್ಲಿ ಸೋಮವಾರ ಇಂದ್ರಾಣಮ್ಮ ದೇವಾಲಯದ 26ನೇ ವರ್ಷದ ಪೂಜಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಹೋಮ ಹವನ, ಗಣಪತಿ ಹೋಮ, ಪುಣ್ಯಾಹ, ಕಳಸ ಪ್ರತಿಷ್ಠಾಪನೆ, ನವಗ್ರಹ ಹೋಮ, ದುರ್ಗಹೋಮ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನಡೆಯಿತು.

ಕಪಿಲಾ ನದಿಗೆ ತೆರಳಿ ಗಂಗೆ ಪೂಜೆ ನಡೆಸಿ, ಪೂರ್ಣಕುಂಭ ಕಳಸದೊಂದಿಗೆ ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಮಂಗಳವಾದ್ಯ, ಸತ್ತಿಗೆ, ಹಳೇ ಹೆಗ್ಗುಡಿಲು ನೀಲಕಂಠ ತಂಡದಿಂದ ವೀರಗಾಸೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳ ಜೊತೆಯಲ್ಲಿ ಮೆರವಣಿಗೆ ನಡೆಸಲಾಯಿತು.

ಉತ್ಸವ ಮೂರ್ತಿಯು ದೇವಾಲಯಕ್ಕೆ ತಲುಪಿದ ನಂತರ ವಿಶೇಷ ಪೂಜೆ ನಡೆಸಿ, ಮಹಾಮಂಗಳಾರತಿ ಮಾಡಿ ಪ್ರಸಾದ ವಿನಿಯೋಗ ಮಾಡಲಾಯಿತು. ನಂತರ ಅನ್ನ ಸಂತರ್ಪಣೆ ನಡೆಸಲಾಯಿತು.

ಕಪಿಲಾ ನದಿಯಲ್ಲಿ ಗಂಗೆ ಪೂಜೆ ಸಲ್ಲಿಸಿ, ನಂತರ ಅಮ್ಮನವರ ಕಳಸವನ್ನು ದೇವಸ್ಥಾನ ಅರ್ಚಕರು ಹೊತ್ತು ಮೆರವಣೆಗೆ ಮೂಲಕ ದೇವಸ್ಥಾನಕ್ಕೆ ತಲುಪಿತು. ಜೊತೆಗೆ ಹೆಣ್ಣು ಮಕ್ಕಳು ಪೂರ್ಣಕುಂಭ ಕಳಸವನ್ನು ಹೊತ್ತು ಹರಕೆ ತೀರಿಸಿದರು.

ಸರಗೂರು ಪಟ್ಟಣ ಪಂಚಾಯಿತಿ ಸದಸ್ಯ ನೂರಾಳಸ್ವಾಮಿ, ಗೋಬಿ ರಂಗಸ್ವಾಮಿ, ಯಜಮಾನರಾದ ತಮ್ಮಣ್ಣ, ನರಸಿಂಹೇಗೌಡ, ಅಲಂಕಾರ ಸಮಿತಿ ಅಧ್ಯಕ್ಷ ರವಿಗೌಡ, ಮುಖಂಡರಾದ ರಾಜೇಶ್, ಲೋಕೇಶ್, ಶಶಿ, ಸುನೀಲ್. ಅನಿಲ್ ಮೆಡಿಕಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.