ಸರಗೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಪ್ರಧಾನಮಂತ್ರಿ ಸುರಕ್ಷಿತಾ ಮಾತೃತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ. ರವಿಕುಮಾರ್ ಮಾತನಾಡಿ, ಪ್ರತಿ ತಿಂಗಳು 9ನೇ ತಾರೀಖು ಮತ್ತು 24ನೇ ತಾರೀಖು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರಧಾನಮಂತ್ರಿ ಸುರಕ್ಷಿತಾ ಮಾತೃತ್ವ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಗರ್ಭಿಣಿಯರನ್ನು ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ವೈದ್ಯಕೀಯ ತಪಾಸಣೆ ಮಾಡಿಸಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಿಂದ ಪರೀಕ್ಷಿಸಿ, ಉಚಿತವಾಗಿ ರಕ್ತದ ಒತ್ತಡ, ಎಚ್ಬಿ ಪರೀಕ್ಷೆ, ತೂಕವನ್ನು ಪರೀಕ್ಷೆ ಮಾಡಿಸಲಾಗುತ್ತದೆ ಎಂದು ಹೇಳಿದರು.

ಗರ್ಭಿಣಿಯರಲ್ಲಿ ತೊಂದರೆಗಳು ಕಂಡು ಬಂದಲ್ಲಿ ಸೂಕ್ತ ಸಲಹೆ, ಚಿಕಿತ್ಸೆಯನ್ನು ನೀಡಿ ಮೇಲ್ಮಟ್ಟದ ಆಸ್ಪತ್ರೆಗಳಿಗೆ ಕರೆದು ಕೊಂಡು ಹೋಗುವುದು, ಪೌಷ್ಟಿಕ ಆಹಾರ ಸೇವನೆ, ಸುರಕ್ಷಿತ ಹೆರಿಗೆ, ಸುರಕ್ಷಿತ ತಾಯಿತನ, ಸುರಕ್ಷಿತ ಶಿಶು ಆರೈಕೆ ಬಗ್ಗೆ ಅರಿವು ಮೂಡಿಸಲಾಗುತ್ತದೆ. ತಾಯಿ ಮರಣ ಮತ್ತು ಶಿಶು ಮರಣವನ್ನು ತಪ್ಪಿಸುವುದು, ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ. ಪಾರ್ಥಸಾರಥಿ, ರವಿರಾಜ್, ಪುಷ್ಪಾ, ಶಾಂತಿ, ಮಹದೇವ, ಮಾನಸಾ, ಶ್ವೇತಾ, ಮಂಜುಳಾ, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.