ಸರಗೂರು: ‘ಎಚ್.ಡಿ.ಕೋಟೆ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಶಾದಿ ಮಹಲ್ ಮಾದರಿಯಲ್ಲಿಯೇ ಸರಗೂರಿನಲ್ಲಿಯೂ ಶಾದಿ ಮಹಲ್ ನಿರ್ಮಾಣಕ್ಕೆ ಮುಂದಾಗಲಾಗುವುದು’ ಎಂದು ಶಾಸಕ ಅನಿಲ್ ಚಿಕ್ಕಮಾದು ಭರವಸೆ ನೀಡಿದರು.

ಪಟ್ಟಣದಲ್ಲಿರುವ ಈದ್ಗಾ ಮೈದಾನದಲ್ಲಿ ಶನಿವಾರ ಈದ್ ಉಲ್ ಫಿತ್ರ್ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಹಂಚೀಪುರ ಗ್ರಾಮದ ಸಮೀಪದಲ್ಲಿರುವ ವಕ್ಫ್ ಬೋರ್ಡ್ ಜಾಗದಲ್ಲಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಿಕೊಡಲಾಗುವುದು’ ಎಂದರು.

‘ಕಪಿಲ ನದಿ ದಡದಲ್ಲಿರುವ ಈದ್ಗಾ ಮೈದಾನದ ಸುತ್ತ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು. ಮೈದಾನದ ಮುಂಭಾಗದಲ್ಲಿ ಒಳಚರಂಡಿ ನಿರ್ಮಾಣ, ಮಿನಿ ಸೇತುವೆ ನಿರ್ಮಾಣಕ್ಕೂ ಮುಂದಾಗಲಾಗುವುದು. ಎಲ್ಲರೂ ಒಗ್ಗೂಡಿ ಆಚರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ’ ಎಂದರು. ಮುಸ್ಲಿಂ ಬಾಂಧವರಿಗೆ ಸಿಹಿ ಹಂಚಿ, ಶುಭಾಶಯ ಕೋರಿದರು.

ಸರಗೂರು ಮುಸ್ಲಿಂ ಸಮಾಜದ ಮುಖಂಡರಾದ ಇದಾಯತ್ ಉಲ್ಲಾ ಷರೀಫ್ ಅವರು ಸಮುದಾಯದ ಬೇಡಿಕೆಗಳ ಮನವಿ ಮಾಡಿದರು.

ಜಾಮಿಯ ಮಸೀದಿ ಗುರು ಅಬ್ದುಲ್ ರಶೀದ್, ನೂರ್ ಮಸೀದಿ ಗುರು ಅಬ್ದುಲ್ ಜಲೀಲ್, ಮುಖಂಡರಾದ ಇದಾಯತ್ ಉಲ್ಲಾ ಷರೀಫ್, ಜಲೀಲ್, ಅಮೀರ್ ಸುಹೇಲ್, ಅನಸ್, ಯೂನೂಸ್, ಜಾವೇದ್ , ಇಬ್ರಾಹಿಂ, ಅಬ್ದುಲ್ ವಾಜಿದ್, ಮುಪ್ತಿರುಲ್ಲಾ, ಯಾಸೀನ್, ಪಾಷಾ, ಮಹಮದ್ ಅಲಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್, ಚಲುವಕೃಷ್ಣ, ಜಿಪಂ ಮಾಜಿ ಸದಸ್ಯ ಪಿ.ರವಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್.ಎನ್.ನಾಗರಾಜು, ಆರ್ಯ ಮಹೇಶ್, ಶಿವನಂಜು, ಮೂರ್ತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-38-2059949073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.