ಸರಗೂರು: ‘ಸಮ ಸಮಾಜದ ಕನಸು ಕಂಡು ತನ್ಮೂಲಕ ಮಹಿಳೆಯರಿಗೆ ಮತ್ತು ದೀನದಲಿತರಿಗೆ ಸ್ವಾತಂತ್ರ್ಯ ಕಲ್ಪಿಸಿಕೊಟ್ಟ ದಾರ್ಶನಿಕ ಬಸವಣ್ಣ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್ ಕುಮಾರ್ ಹೇಳಿದರು.

ಪಟ್ಟಣ ಪಂಚಾಯಿತಿಯಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರ ತತ್ವ, ಸಿದ್ಧಾಂತ ಅಳವಡಿಸಿಕೊಳ್ಳಬೇಕು ಎಂದರು.

ಕನ್ನಡ ನೆಲದ ಮೇಲೆ ಜ್ಞಾನದ ದೀವಿಗೆಯ ಮಹತ್ವ ಸಾರಿ ಕೂಡಲಸಂಗಮದ ಮಹಾಮನೆಯ ಮೂಲಕ ವೀರಶೈವ ಲಿಂಗಾಯತ ಧರ್ಮದ ಮಾನವಧರ್ಮ ಎತ್ತಿ ಹಿಡಿದ ಮಹಾ ಮಹಿಮ ಬಸವಣ್ಣ ಎಂದರು.

ಬಸವಣ್ಣನವರು ಅನುಭವ ಮಂಟಪದಲ್ಲಿ ಸಮಾಜ ಸುದಾರಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯದ ಹರಿಕಾರ, ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋಗಲಾಡಿಸಿದರು. ಸಮಾಜದ ಅಂಕು ಡೊಂಕು ತಿದ್ದಿದ್ದಾರೆ ಎಂದು ತಿಳಿಸಿದರು.

ಪ.ಪಂ ಅಧ್ಯಕ್ಷೆ ಚೈತ್ರಾಸ್ವಾಮಿ ಮಾತನಾಡಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಶ್ರೀನಿವಾಸ್, ಚಲುವಕೃಷ್ಷ, ಉಮಾರಾಮು, ಸಣ್ಣತಾಯಮ್ಮ, ರಮೇಶ್, ಅಭಿಮಾನಿ ಸ್ವಾಮಿ, ಪುಟ್ಟ, ಶಿವಕುಮಾರ್, ಅರುಣ್ ಆರಾಧ್ಯ, ಅನಿತಾ, ದಿನೇಶ್, ಅರ್ಜುನ, ಇದಿಯಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-38-1076866380

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.