ಸರಗೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸರಗೂರು ತಾಲ್ಲೂಕು ಘಟಕದ ವತಿಯಿಂದ ಮೇ 19ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಜೆಎಸ್ಎಸ್ ಕಾಲೇಜು ಆವರಣದಲ್ಲಿ ಬಸವೇಶ್ವರ ಜಯಂತಿ ಹಾಗೂ ಬಸವ ಭವನ ಭೂಮಿಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 8ಕ್ಕೆ ವಿರಕ್ತ ಮಠ ಮಹದೇವ ಸ್ವಾಮೀಜಿ ಷಟ್ಸ್ಥಲ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬಸವೇಶ್ವರ ಭಾವಚಿತ್ರ ಮೆರವಣಿಗೆಗೆ ಹಂಚೀಪುರ ಪಟ್ಟದ ಮಠದ ಚನ್ನಬಸವ ಸ್ವಾಮೀಜಿ, ದಡದಹಳ್ಳಿ ಗುರುಮಲ್ಲೇಶ್ವರಮಠದ ಷಡಕ್ಷರಿ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಹಂಚೀಪುರ ಸಿದ್ದಮಲ್ಲೇಶ್ವರ ಪಟ್ಟದ ಮಠದ ಕಿರಿಯ ಸ್ವಾಮೀಜಿ ತೋಂಟದಾರ್ಯ ಸ್ವಾಮೀಜಿ, ಬೀಚನಹಳ್ಳಿ ಸಿದ್ದಮಲ್ಲೇಶ್ವರಪಟ್ಟದ ಮಠದ ನಾಗೇಂದ್ರ ಸ್ವಾಮೀಜಿ,ಪುರ ಬಸವೇಶ್ವರ ಮಠ ಚಂದ್ರಶೇಖರ ಸ್ವಾಮೀಜಿ, ಮಾದಾಪುರಚಂದ್ರಮೌಳೇಶ್ವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಜಕ್ಕಹಳ್ಳಿ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ದೇವನೂರು ಗುರುಮಲ್ಲೇಶ್ವರ ಮಠದ ಮಹಾಂತ ಸ್ವಾಮೀಜಿ ಭಾಗವಹಿಸಲಿದ್ದಾರೆ. ಬಸವ ಭವನದ ಭೂಮಿಪೂಜೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ನೆರವೇರಿಸಲಿದ್ದಾರೆ. ಬಸವೇಶ್ವರ ಭಾವಚಿತ್ರಕ್ಕೆ ಸಚಿವ ಡಾ. ಎಚ್.ಸಿ.ಮಹದೇವಪ್ಪ ಪುಷ್ಪಾರ್ಚನೆ ಮಾಡಲಿದ್ದಾರೆ. ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಲಿದ್ದಾರೆ. ಮಹಾಸಭಾ ತಾಲ್ಲೂಕು ಅಧ್ಯಕ್ಷ ಕೆ.ಎಸ್. ವೀರಭದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾಸಭಾ ಪದಾಧಿಕಾರಿಗಳು ಭಾಗವಹಿಸುವರು ಎಂದುಮಹಾಸಭಾ ಸರಗೂರು ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗುರುಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-38-730447369

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.