ಸರಗೂರು: ‘ಕಾರ್ಮಿಕರು ಪರಿಶ್ರಮದಲ್ಲಿಯೇ ಬದುಕಿನ ಖುಷಿ ಕಾಣುವ ಶ್ರೇಷ್ಠ ಜೀವಿಗಳು’ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.

ಪಟ್ಟಣದ ಸಂತೆಮಾಳದ ಬಳಿ ಇರುವ ಸೋಮೇಶ್ವರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಶುಕ್ರವಾರ ನಡೆದ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

‘ಕಠಿಣ ಪರಿಶ್ರಮ, ಸಮರ್ಪಣಾ ಭಾವಕ್ಕೆ ಇವರು ಸಾಕ್ಷಿ. ದುಡಿಮೆ ಮನುಷ್ಯನ ಘನತೆ ಮತ್ತು ಸೃಜನಶೀಲತೆಯ ಶ್ರೇಷ್ಠತೆಯನ್ನು ವ್ಯಕ್ತಪಡಿಸುವ ಏಣಿ’ ಎಂಸದರು.

‘ಪಟ್ಟಣ ಪಂಚಾಯಿತಿಯಿಂದ ಸಂಘಕ್ಕೆ ನಿವೇಶನ ನೀಡಿದರೆ ಶಾಸಕರ ಅನುದಾನದಿಂದ ಹಣವನ್ನು ನೀಡುತ್ತೇನೆ’ ಭರವಸೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಚ್.ರಮೇಶ್ ಮಾತನಾಡಿ, ‘ಸಂಘದಲ್ಲಿ 180 ಜನ ಸದಸ್ಯರು ಇದ್ದಾರೆ. ಪ್ರತಿ ತಿಂಗಳು ಸಭೆ ಹಾಗೂ ಸಮಾರಂಭಗಳು ಮಾಡಲು ನಿವೇಶನ ಇಲ್ಲ. ನಿಮ್ಮ ಅವಧಿಯಲ್ಲಿ ನಿವೇಶನ ಹಾಗೂ ಕಟ್ಟಡ ನಿರ್ಮಾಣ ಮಾಡಲು ಅನುದಾನವನ್ನು ನೀಡಬೇಕು’ ಎಂದು ಮನವಿ ಮಾಡಿಕೊಂಡರು.

ಸಮಾಜ ಸೇವಕ ನಿಂಗರಾಜು, ಸಂಘದ ಅಧ್ಯಕ್ಷ ಮಣಿ, ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ, ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘ ರಾಜ್ಯಾಧ್ಯಕ್ಷ ಚಂದನಗೌಡ ಮಾತನಾಡಿದರು.

ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡಿದ ಹಿರಿಯ ಕಾರ್ಮಿಕರಿಗೆ ಹಾಗೂ ಕಾರ್ಮಿಕ ಮಕ್ಕಳಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ.ಪಂ. ಅಧ್ಯಕ್ಷೆ ಚೈತ್ರಾ ಸ್ವಾಮಿ, ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಎಸ್.ಎನ್.ನಾಗರಾಜು, ತಂಬಾಕು ಮಂಡಳಿ ಸದಸ್ಯ ಪರಶಿವಮೂರ್ತಿ, ಬಿಇಓ ರಾಜು, ಕಾರ್ಮಿಕ ಇಲಾಖೆ ಸಿಬ್ಬಂದಿ ಪರಶಿವಮೂರ್ತಿ, ಮುಖಂಡ ಜಲೀಲ್, ಪಿಎಸ್ಐ ಆರ್ ಕಿರಣ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-38-880138158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.