ಸರಗೂರು: ಬ್ರಹ್ಮೋತ್ಸವದ ಅಂಗವಾಗಿ ಬುಧವಾರ ಲಕ್ಷ್ಮಿ ನರಸಿಂಹಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ದೇವಸ್ಥಾನದ ಆವರಣದಿಂದ ಆರಂಭವಾದ ರಥೋತ್ಸವವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮಂಗಳವಾದ್ಯ, ವೇದಘೋಷ, ಜಯ ಘೋಷಗಳ ನಡುವೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಧಾರ್ಮಿಕ ಸಂಭ್ರಮವನ್ನು ಹೆಚ್ಚಿಸಿತು.

ರಥೋತ್ಸವದ ಸಂದರ್ಭ ಪಟ್ಟಣದ ವಿವಿಧ ಸಮುದಾಯಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ದೇವರ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನದ ಮುಖ್ಯ ಅರ್ಚಕರಾದ ಹಾಗೂ ಮಲ್ಲೇಶ್ವರಂ ಅವರು ವೇದಮಂತ್ರ ಉಚ್ಚಾರಣೆಗಳೊಂದಿಗೆ ವಿಶೇಷ ಪೂಜೆ, ಹೋಮ, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಸತತವಾಗಿ ಐದನೇ ವರ್ಷದ ಬ್ರಹ್ಮೋತ್ಸವ ಆಚರಣೆ ನಿಮಿತ್ತ ಈ ಬಾರಿಯ ರಥೋತ್ಸವಕ್ಕೆ ವಿಶೇಷ ಮಹತ್ವ ದೊರಕಿದ್ದು, ಭಕ್ತರಲ್ಲಿ ಹೆಚ್ಚಿನ ಉತ್ಸಾಹ ಕಂಡುಬಂದಿತು. ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸರಗೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು, ಜಿಲ್ಲೆ, ತಾಲ್ಲೂಕುಗಳ ವಿವಿಧ ಭಾಗಗಳಿಂದ ಸಾವಿರಕ್ಕೂ ಹೆಚ್ಚು ಭಕ್ತರು ಬಂದು ದೇವರ ದರ್ಶನ ಪಡೆದರು.

ದೇವಾಲಯದ ಆವರಣದಲ್ಲಿ ದಿನವಿಡೀ ಭಕ್ತಿಯ ವಾತಾವರಣ ಮನೆಮಾಡಿದ್ದು, ಭಕ್ತರು ದೇವರ ನಾಮಸ್ಮರಣೆ, ಪೂಜೆ ಹಾಗೂ ಪ್ರಸಾದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಕ್ರಮವನ್ನು ವೀಕ್ಷಿಸಲು ಅನುಕೂಲವಾಗುವಂತೆ ದೇವಸ್ಥಾನದ ವಿವಿಧ ಭಾಗಗಳಲ್ಲಿ ಬೃಹತ್ ಪರದೆಗಳನ್ನು ಅಳವಡಿಸಲಾಗಿದ್ದು, ಕಾರ್ಯಕ್ರಮಗಳನ್ನು ಸಾರ್ವಜನಿಕರು ವೀಕ್ಷಿಸಿದರು.

ಬ್ರಹ್ಮೋತ್ಸವದ ಅಂಗವಾಗಿ ಪ್ರತಿದಿನವೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮೇ 30ರಂದು ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆಗಳೊಂದಿಗೆ ಉತ್ಸವ ಸಮಾರೋಪಗೊಳ್ಳಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-38-542432528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.