ಮೈಸೂರು: ' ದಾವಣಗೆರೆ ಉಪಚುನಾವಣೆ ಫಲಿತಾಂಶದ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ ಆಗಬಹುದು' ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ ನಲ್ಲಿ ಮಂಗಳವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು.

' ಜಬ್ಬಾರ್ ಸೇರಿದಂತೆ ಕೇವಲ ಅಲ್ಪಸಂಖ್ಯಾತ ನಾಯಕರ ಮೇಲಿನ ಕ್ರಮವು ಮುಸ್ಲಿಂ ಮತಗಳ ಮೇಲೆ ಖಂಡಿತ ಪರಿಣಾಮ ಬೀರಲಿದೆ. ಈ ಕಾರಣಕ್ಕೆ ನಾವೆಲ್ಲ ಮಧ್ಯಸ್ಥಿಕೆ ವಹಿಸಿದ್ದೇವೆ' ಎಂದರು.

' ಈ ಹಿಂದೆಯೂ ಹೀಗೆ ಅಮಾನತು ಆಗಿದ್ದವರು ಪಕ್ಷಕ್ಕೆ ವಾಪಸ್ ಆಗಿದ್ದಾರೆ. ಜಬ್ಬಾರ್ ಕೂಡ ಮರಳಬಹುದು. ಸದ್ಯ ಅವರನ್ನು ಹೊರತುಪಡಿಸಿ ಉಳಿದ ಯಾರ ಮೇಲೂ ಕ್ರಮ ಕೈಗೊಂಡಿಲ್ಲ' ಎಂದರು.

' ದಾವಣಗೆರೆ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದೆಯೋ, ಇಲ್ಲವೋ ಗೊತ್ತಿಲ್ಲ. ಚುನಾವಣೆ ಫಲಿತಾಂಶದ ಬಳಿಕ ಈ ಕುರಿತು ಚರ್ಚಿಸುತ್ತೇವೆ' ಎಂದರು.

ಎಸ್ಡಿಪಿಐಗೆ ಕಾಂಗ್ರೆಸ್ ನ ಕೆಲವು ಮುಖಂಡರಿಂದಲೇ ಹಣಕಾಸು ನೆರವು ನೀಡಲಾಗಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ ' ಈ ಬಗ್ಗೆ ನನಗೆ ಮಾಹಿತಿ ಇಲ್ಲ' ಎಂದರು.

'ಕೆ.ಎನ್. ರಾಜಣ್ಣ ಅವರ ಹೇಳಿಕೆ ಅವರ ವೈಯಕ್ತಿಕ. ರಾಜಕಾರಣದಲ್ಲಿ ಯಾವಾಗಲೂ ನಿಷ್ಠುರವಾಗಿ ಇರಲು ಆಗದು. ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನಷ್ಟೇ ಕಠಿಣವಾಗಿ ಇದ್ದಾರೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.