ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಚಕ್ರವರ್ತಿ ಸೂಲಿಬೆಲೆಗೆ ‘ಸಾವರ್ಕರ್ ಸಮ್ಮಾನ್’

Published 26 ಮೇ 2024, 14:27 IST
Last Updated 26 ಮೇ 2024, 14:27 IST
ಅಕ್ಷರ ಗಾತ್ರ

ಮೈಸೂರು: ‘ನಗರದ ಸಾವರ್ಕರ್ ಪ್ರತಿಷ್ಠಾನದಿಂದ ಮೇ 28ರಂದು ಸಂಜೆ 5.30ಕ್ಕೆ ಇಲ್ಲಿನ ಕಲಾಮಂದಿರದಲ್ಲಿ ‘ವೀರ ಸಾವರ್ಕರ್ ಸಮ್ಮಾನ್-2024’ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ತಿಳಿಸಿದರು.

‘ಸಾವರ್ಕರ್‌ ಅವರ 141ನೇ ಜಯಂತಿ ಪ್ರಯುಕ್ತ ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸಮ್ಮಾನ್‌ ಪ್ರದಾನ ಮಾಡಲಾಗುವುದು. ಇದು ₹1 ಲಕ್ಷ ನಗದು, ಸಾವರ್ಕರ್ ಪುತ್ಥಳಿ ಹಾಗೂ ಫಲಕ ಹೊಂದಿದೆ. ಕಾದಂಬರಿಕಾರ ಎಸ್.ಎಲ್.ಭೈರಪ್ಪ, ಪತ್ರಕರ್ತ ಅಜಿತ್ ಹನುಮಕ್ಕನವರ್ ಪಾಲ್ಗೊಳ್ಳಲಿದ್ದಾರೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT