ಮೈಸೂರು: ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಸಂಬಂಧ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೀಡಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು’ ಎಂದು ಲೇಖಕ ದೇವನೂರ ಮಹಾದೇವ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಪತ್ರ ಬರೆದಿದ್ದು, ‘ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ಏಗುತ್ತಿರುವ ತರುಣರು, ತಮ್ಮ ತಾರುಣ್ಯ ಕಳೆದುಕೊಂಡು ಮಧ್ಯ ವಯಸ್ಕರಾಗುತ್ತಿದ್ದಾರೆ. ಇದು ತುಂಬಾ ದಯನೀಯ ಪರಿಸ್ಥಿತಿ. ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ’ ಎಂದಿದ್ದಾರೆ.

‘ಇಂತಹ ಪರಿಸ್ಥಿತಿಯಲ್ಲಿ ನನಗೆ ತೋರುತ್ತಿರುವ ಪರಿಹಾರ ಇದು. ಒಂದು, ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇದರ ಜೊತೆಯಲ್ಲೇ, ಇಂದು ದಲಿತ ಸಮುದಾಯವೂ ದಿನದಿನಕ್ಕೂ ಚಲನಶೀಲತೆ ಪಡೆದುಕೊಂಡು ಬದಲಾವಣೆ ಯಾಗುತ್ತಿದ್ದು, ಅದಕ್ಕೆ ತಕ್ಕಂತೆ ಮೀಸಲಾತಿ ಪ್ರಾತಿನಿಧ್ಯವನ್ನು ಸಮತೋಲನ ಮಾಡುವುದಕ್ಕಾಗಿ ಹಾಗೂ ಕಾಲಕಾಲಕ್ಕೆ ಹೊಸ ದತ್ತಾಂಶಗಳಿಂದ ಒಳ ಮೀಸಲಾತಿಯ ಪ್ರಮಾಣವನ್ನು ಪರಿಷ್ಕರಿಸಲು, ಹಿಂದುಳಿದ ವರ್ಗಗಳಿಗೆ ಇರುವಂತೆಯೇ, ಪರಿಶಿಷ್ಟ ಜಾತಿಗಳ ಆಯೋಗಕ್ಕೂ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಒದಗಿಸಬೇಕು ಎಂಬುದು ನನ್ನ ಭಾವನೆ. ಈ ರೀತಿಯಾದರೆ ಆ ಆಯೋಗದ ಮುಂದೆ, ನಾಗಮೋಹನದಾಸ್ ಅವರ ವರದಿಯ ಬಗ್ಗೆ ಇರಬಹುದಾದ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಪರಿಹಾರ ಕಂಡುಕೊಳ್ಳಲು ಸಾಧ್ಯತೆ ಹೆಚ್ಚುತ್ತದೆ’ ಎಂದು ತಿಳಿಸಿದ್ದಾರೆ.

‘ಈ ಹಿಂದೆ ಮೀಸಲಾತಿ ಹೆಚ್ಚಳ ಆಯೋಗದ ಅಧ್ಯಕ್ಷರಾಗಿ ನಾಗಮೋಹನದಾಸ್ ಅವರು ಸಲ್ಲಿಸಿದ ವರದಿಯಲ್ಲಿ ‘ಪರಿಶಿಷ್ಟ ಜಾತಿ ಸಮುದಾಯವು ಶೇ 17.98, ಪರಿಶಿಷ್ಟ ಪಂಗಡವು ಶೇ 7.41 ಜನಸಂಖ್ಯೆ ಇರುವುದರಿಂದ ಎಸ್.ಸಿಗೆ ಶೇ 18 ಹಾಗೂ ಎಸ್.ಟಿಗೆ ಶೇ 7.50 ನೀಡುವುದು ಸೂಕ್ತ’ ಎಂದಿದ್ದರು. (ಆದರೆ, ಅಂದು ಆ ಆಯೋಗದ ಮುಂದೆ ಶೇ 17ಕ್ಕೆ ಏರಿಸುವ ವಿಚಾರವಷ್ಟೇ ಇದ್ದುದರಿಂದ, ಶಿಫಾರಸ್ಸು ಅಷ್ಟಕ್ಕೆ ಸೀಮಿತವಾಗಿತ್ತು). ತಾವು ಶೇ 1ರಷ್ಟು ಹೆಚ್ಚಳದ ನಿರ್ಧಾರ ಕೈಗೊಂಡರೆ ಹೆಚ್ಚುವರಿಯಾಗಿ ಸಿಗುವ ಶೇ 1 ರಿಂದ ಇಂದಿನ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾದ ಸಾಧ್ಯತೆ ಇದೆ. ಇದು ಸರ್ಕಾರದ ಕೈಯಲ್ಲೇ ಇದೆ ಎಂದುಕೊಂಡಿದ್ದೇನೆ. ನೀವು ಈ ಕುರಿತು ಆಶ್ವಾಸನೆ ನೀಡಿದರೂ ದಲಿತ ಸಮುದಾಯ ನಂಬುತ್ತದೆ’ ಎಂದು ಸಲಹೆ ನೀಡಿದ್ದಾರೆ.

‘ಆ.1, 2024ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಪರಿಶಿಷ್ಟ ಜಾತಿಗಳು ವೈವಿಧ್ಯಮಯ ಭಿನ್ನರೂಪತೆಯ (Heterogeneous) ಗುಂಪುಗಳಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ವರ್ಗೀಕರಣ ನಿರ್ಧರಿಸುವಾಗ ಸರ್ವಾಂಗೀಣ ಹಿಂದುಳಿದಿರುವಿಕೆಯನ್ನೂ ಪರಿಗಣಿಸಿ ನಿರ್ಧರಿಸಬೇಕಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನಾಗಮೋಹನ್ದಾಸ್ ಅವರ ವರದಿಯನ್ನು ಗಮನಿಸಿದರೆ ಅದು ಸುಪ್ರೀಂ ಕೋರ್ಟ್ ಆಶಯಕ್ಕೆ ತಕ್ಕಂತೆಯೇ ಇರುವಂತೆ ಕಾಣಿಸುತ್ತದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

‘ಇದಲ್ಲದೆ, ಜಸ್ಟೀಸ್ ನಾಗಮೋಹನ್ದಾಸ್ ವರದಿಯು ಸಮಗ್ರ ಸಮೀಕ್ಷೆ ಮಾಡುವ ಮೂಲಕವೇ ಅಂಕಿ-ಅಂಶಗಳನ್ನು ಸಂಗ್ರಹಿಸಿದೆ. ವಿಸ್ತಾರವಾದ ಸಮೀಕ್ಷೆ ಮಾಡಿ ಶೇ 94 ರಷ್ಟು ಜನರ ಮಾಹಿತಿ ಸಂಗ್ರಹಿಸಿದೆ. ಮನೆ ಮನೆ ಸರ್ವೆ, ನಿಗದಿತ ಕೇಂದ್ರಗಳಲ್ಲಿ ಸರ್ವೆ, ಆನ್ಲೈನ್ ಸರ್ವೆ ಅವಕಾಶ.. ಹೀಗೆ ಸಮಗ್ರ ಪ್ರಯತ್ನ ಮಾಡಿದೆ. ಈ ರೀತಿ ಸಮೀಕ್ಷೆ ಅಪರೂಪ. ಮೊದಲು ಇದನ್ನು ಎಲ್ಲರೂ ಗೌರವಿಸಬೇಕಾಗಿದೆ. ಹಾಗೆಂದು ಈಗ ಎದ್ದಿರುವ ಆಕ್ಷೇಪಣೆಗಳನ್ನು ತಳ್ಳಿ ಹಾಕಬೇಕಿಲ್ಲ. ಅವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶಾಶ್ವತ ಆಯೋಗಕ್ಕೆ ಹೆಚ್ಚಿನ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ತಾವು ಘೋಷಣೆ ಮಾಡುವುದಾದರೆ, ಅದು ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಲಭ್ಯವಾಗುವ ಜಾತಿ– ಜನಗಣತಿಯ ದತ್ತಾಂಶಗಳ ಮೂಲಕ ಪರಿಷ್ಕರಣೆಯ ಮೂಲಕ ಸಮತೋಲನ ಮಾಡಲು ಅವಕಾಶವಾಗುತ್ತದೆ’ ಎಂದಿದ್ದಾರೆ.

ಕೊನೆಯದಾಗಿ,

l ಎಸ್ಸಿ, ಎಸ್ಟಿ ಮೀಸಲಾತಿಯನ್ನು ಶೇ 18 ಮತ್ತು ಶೇ 7.5 ಮಾಡುವ ಬಗ್ಗೆ ಆಶ್ವಾಸನೆ ನೀಡಬೇಕು

l ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶಾಶ್ವತ ಆಯೋಗಕ್ಕೆ ಹೆಚ್ಚಿನ ಕಾರ್ಯವ್ಯಾಪ್ತಿ ಹಾಗೂ ಅಧಿಕಾರದ ಘೋಷಣೆ ಮಾಡಬೇಕು

l ಮೀಸಲಾತಿಯನ್ನು ನೀಡದಿರುವುದಕ್ಕಾಗಿಯೇ ಹುಟ್ಟಿಕೊಂಡಿದೆಯೇನೋ ಎಂಬಂತಿರುವ ‘ಗುತ್ತಿಗೆ ಕೆಲಸ’ಗಳಲ್ಲು ಮೀಸಲಾತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕು

l ಪರಿಶಿಷ್ಟ ಜಾತಿ/ಪಂಗಡಗಳ ಹೆಸರಿನಲ್ಲಿ ಸುಳ್ಳು ಪ್ರಮಾಣ ಪತ್ರ ಪಡೆದುಕೊಂಡಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಅಗತ್ಯವಿರುವ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ನಿರ್ಧಾರ ಪ್ರಕಟಿಸಬೇಕು

‘ಇಂಥಹ ನಿಲುವುಗಳು ಜಸ್ಟೀಸ್ ನಾಗಮೋಹನ್ದಾಸ್ ವರದಿಯನ್ನು ತಕ್ಷಣವೇ ಅನುಷ್ಠಾನ ಮಾಡಲು ಪೂರಕ ವಾತಾವರಣ ಉಂಟು ಮಾಡಬಹುದು ಎಂದು ಭಾವಿಸುತ್ತೇನೆ’ ಎಂದು ಮಹಾದೇವ ಹೇಳಿದ್ದಾರೆ.

ವರದಿ ಇಷ್ಟವಾಗಲಿಲ್ಲ ಎಂದರೆ ಅವೈಜ್ಞಾನಿಕ ಎನ್ನುವ ಪ್ರವೃತ್ತಿ ಸರಿಯಲ್ಲ
–ದೇವನೂರ ಮಹಾದೇವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.