ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಕರ ಸಮಾಲೋಚನೆ ಸಭೆ

Published : 26 ಆಗಸ್ಟ್ 2024, 6:33 IST
Last Updated : 26 ಆಗಸ್ಟ್ 2024, 6:33 IST
ಫಾಲೋ ಮಾಡಿ
Comments

ಜಯಪುರ: ‘ಐಚ್ಛಿಕ ವಿಷಯಗಳಾದ ಗಣಿತ ಮತ್ತು ವಿಜ್ಞಾನಗಳನ್ನು ಪ್ರಾಯೋಗಿಕವಾಗಿ ಬೋಧನೆ ಮಾಡುವುದರಿಂದ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಅನ್ವೇಷಣೆಯ ಮನೋಭಾವ ಬೆಳೆಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಣ ಸಂಯೋಜಕರಾದ ಯು.ಜಿ ಮೋಹನ್ ಕುಮಾರ್ ಆರಾಧ್ಯ ಹೇಳಿದರು.

ಜಯಪುರ ಮತ್ತು ಹಾರೋಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

‘ಈಗಾಗಲೇ ವಿಜ್ಞಾನ ಕಲಿಕೆಗೆ ಪೂರಕವಾಗಿ ಶಾಲಾ ಹಂತದಲ್ಲಿ ವಾರದ ಪ್ರಯೋಗ ಕಾರ್ಯಕ್ರಮ ನಡೆಯುತ್ತಿದ್ದು, ಮಕ್ಕಳಿಗೆ ವಿಷಯ ಕುತೂಹಲ ಹೆಚ್ಚಾಗಲು ಕಾರಣವಾಗಿದೆ’ ಎಂದರು.

ಹಾರೋಹಳ್ಳಿ (ಜ) ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ರಂಗಸ್ವಾಮಿ, ಜಯಪುರ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ್ ಕುಮಾರ್, ಹಾರೋಹಳ್ಳಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವೇದಾವತಿ, ಬ್ಲಾಕ್ ಸಂಪನ್ಮೂಲ ವ್ಯಕ್ತಿಗಳಾದ ಪಾರ್ವತಮ್ಮ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾರೋಹಳ್ಳಿ ಮುಖ್ಯ ಶಿಕ್ಷಕ ಗಿರೀಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಸುಶೀಲಾ, ಸಂಪನ್ಮೂಲ ಶಿಕ್ಷಕರಾದ ಪ್ರಸನ್ನ ಕುಮಾರ್, ಜಯ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT