ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ‘ಬಹುಮಾನಕ್ಕಿಂತ ಚಪ್ಪಾಳೆಯೇ ದೊಡ್ಡ ಬಹುಮಾನ’

Published 9 ಏಪ್ರಿಲ್ 2024, 7:55 IST
Last Updated 9 ಏಪ್ರಿಲ್ 2024, 7:55 IST
ಅಕ್ಷರ ಗಾತ್ರ

ಮೈಸೂರು: ‘ಸಾಂಸ್ಕೃತಿಕ ಉತ್ಸವಗಳಿಂದ ವಿದ್ಯಾರ್ಥಿಗಳು ಸುಪ್ತ ಪ್ರತಿಭೆಯನ್ನು ಅಭಿವ್ಯಕ್ತಿಸಲು ಸಾಧ್ಯವಾಗುತ್ತದೆ. ಇಂತಹ ಉತ್ಸವಗಳಲ್ಲಿ ಭಾಗವಹಿಸುವುದು ಮುಖ್ಯ. ಬಹುಮಾನಕ್ಕಿಂತ ಚಪ್ಪಾಳೆಯೇ ದೊಡ್ಡ ಬಹುಮಾನ’ ಎಂದು ಖ್ಯಾತ ಭರತನಾಟ್ಯ ಕಲಾವಿದ ಶ್ರೀಧರ್ ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಎಂಎಂಕೆ ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಪ್ರಭಿಗ್ಯಾನ್‌’ 2024 ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

‘ಯುವಜನರು ಸಾಂಸ್ಕೃತಿಕ ಅಭಿವ್ಯಕ್ತಿಗಳಲ್ಲಿ ಗುಣಮಟ್ಟವನ್ನ ಕಾಯ್ದುಕೊಳ್ಳಬೇಕು. ಸಾಧನೆ ಮಾಡಲು ಪರಿಶ್ರಮ ಮುಖ್ಯ. ಇದಕ್ಕಾಗಿ ನಿರಂತರ ಪ್ರಯತ್ನವೂ ಇರಬೇಕು. ಪೋಷಕರು ಮಕ್ಕಳಿಗೆ ಕಷ್ಟವನ್ನು ತಿಳಿಸಿ ಅವರನ್ನು ರೂಪಿಸಿ ಸಾಮಾಜಿಕ ಬದ್ಧತೆಗೆ ಒಳಗಾಗಿಸಬೇಕು. ಆಗ ಅವರಿಗೂ ಲೋಕಜ್ಞಾನ ತಿಳಿಯುತ್ತದೆ’ ಎಂದರು.

‘ವಿದ್ಯಾರ್ಥಿಗಳು ಯಾವುದಾದರೊಂದು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಜನಪದ ಕಲಾವಿದ ಹಾಗೂ ನಟ ಯಶವಂತ್ ಶೆಟ್ಟಿ, ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಸಾಯಿನಾಥ್ ಮಲ್ಲಿಗೆಮಾಡು ಮಾತನಾಡಿದರು.

28 ಕಾಲೇಜುಗಳ 250 ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದರು. ಹೆಚ್ಚು ಬಹುಮಾನ ಪಡೆದ ನಗರದ ಮೈಕಾ ಪದವಿ ಕಾಲೇಜು ಸಮಗ್ರ ಪ್ರಶಸ್ತಿ (ಪಾರಿತೋಷಕ) ತನ್ನದಾಗಿಸಿಕೊಂಡಿತು.

ಪಿಯು ಕಾಲೇಜಿನ ಪ್ರಾಂಶುಪಾಲೆ ನಯನಕುಮಾರಿ, ಐಕ್ಯೂಎಸಿ ಸಂಚಾಲಕಿ ಕೆ.ಎಸ್. ಸುಕೃತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜ್ಯೋತಿಲಕ್ಷ್ಮಿ, ಕಲಾವಿದೆ ಸೌಮ್ಯಾ ಶ್ರೀಧರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT