ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈತರಿಗೆ ಬಿತ್ತನೆ ಬೀಜ ವಿತರಣೆ

Published 22 ಮೇ 2024, 4:43 IST
Last Updated 22 ಮೇ 2024, 4:43 IST
ಅಕ್ಷರ ಗಾತ್ರ

ನಂಜನಗೂಡು: ತಾಲ್ಲೂಕಿನ ಯಾಲಹಳ್ಳಿ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದಲ್ಲಿ ಗುರುವಾರ  ಹಿರಿಯ ಪರೀಕ್ಷಕ ರಮೇಶ್ ಅವರು ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ವಿತರಿಸಿದರು.

ಬಳಿಕ ಮಾತನಾಡಿ, ‘ನೀರಾವರಿ ಜಮೀನು ಹೊಂದಿರುವ ರೈತರ ಜಾನುವಾರುಗಳಿಗೆ ಮೇವಿಗೆ ತೊಂದರೆ ಉಂಟಾಗಬಾರದೆಂಬ ಉದ್ದೇಶದಿಂದ ಪಶುಪಾಲನ ಇಲಾಖೆಯಿಂದ ಉಚಿತವಾಗಿ ಬಿತ್ತನೆ ಬೀಜದ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ರೈತರು ಮೇವನ್ನು ಬೆಳೆದು ಜಾನುವಾರಗಳಿಗೆ ಮೇವಿನ ಕೊರತೆಯಾಗದಂತೆ ನಿರ್ವಹಿಸಬೇಕೆಂದು’ ಎಂದು ಹೇಳಿದರು.

ಗ್ರಾಮ ಪಂಚಾಯತಿ ಸದಸ್ಯ ಸಿ ಗುರುಪ್ರಸಾದ್, ಗುರು ಮಲ್ಲಪ್ಪ, ಪುಟ್ಟರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT