ಮೈಸೂರು: ‘ತಾಲಿಬಾನ್ ಆಡಳಿತವನ್ನು ಪರಿಶೀಲಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಫ್ಗಾನಿಸ್ತಾನಕ್ಕೆಕಳುಹಿಸಿಕೊಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದರು.

ನಗರದಲ್ಲಿ ಶನಿವಾರ ನಡೆದ ‘ಮ.ವೆಂಕಟರಾಮು ಅಭಿನಂದನಾ ಸಮಾರಂಭ’ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಂದಗಿ, ಹಾನಗಲ್ ಉಪಚುನಾವಣೆ ಸಂಬಂಧ ವಿರೋಧ ಪಕ್ಷದವರು ಬಹಳ ಉದ್ವೇಗದಿಂದ, ವಿವೇಚನೆ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡಿದ್ದಾರೆ. ಅವರು ರಾಷ್ಟ್ರಮಟ್ಟದ ರಾಜಕೀಯವನ್ನು ಅರ್ಥ ಮಾಡಿಕೊಂಡು ಮಾತನಾಡುತ್ತಿಲ್ಲ. ಅವರ ಭಾಷಣ ಕೇಳಿದ್ದೀರಾ? ಯಾರಾದರೂ ಸಹಿಸುತ್ತಾರೆಯೇ? ಅದಕ್ಕೆ ಆಡಳಿತ ಪಕ್ಷದವರು ಪ್ರತಿಕ್ರಿಯೆ ನೀಡುವುದು ತಪ್ಪೇ’ ಎಂದು ಪ್ರಶ್ನಿಸಿದರು.

‘ವಿರೋಧ ಪಕ್ಷದ ನಾಯಕ ತನ್ನ ಜವಾಬ್ದಾರಿ ಅರಿತು ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಬೇಕು. ಅದನ್ನು ಬಿಟ್ಟು ಈ ದೇಶದ ಪ್ರಧಾನಿ ಬಗ್ಗೆ ಮಾತನಾಡುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರವನ್ನು ತಾಲಿಬಾನ್‌ಗೆ ಹೋಲಿಸುತ್ತಿದ್ದಾರೆ. ರಾಷ್ಟ್ರ ಮಟ್ಟದ ಯಾವ ನಾಯಕನೂ ಹೀಗೆ ಮಾತನಾಡುತ್ತಿಲ್ಲ. ಇದು ನನ್ನ ಮನಸ್ಸಿಗೆ ನೋವಾಗಿದೆ’ ಎಂದರು.

‘ಸಿಂದಗಿ, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.