ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರಣಿ ಅಪಘಾತ: ಕಾರು ಬಸ್ ಜಖಂ, ಓರ್ವ ಸಾವು

Published 17 ಮೇ 2024, 8:57 IST
Last Updated 17 ಮೇ 2024, 8:57 IST
ಅಕ್ಷರ ಗಾತ್ರ

ಹುಣಸೂರು: ಮೈಸೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸರಣಿ ಅಫಘಾತ ಸಂಭವಿಸಿ ಬೈಕ್‌ ಸವಾರ ಸಾವನ್ನಪ್ಪಿದ್ದಾರೆ.

ಮೈಸೂರಿನ ಹೂಟಗಳ್ಳಿಯ ಕೂಲಿ ಕಾರ್ಮಿಕ ಕರಿಯಪ್ಪ (40) ಮೃತಪಟ್ಟವರು.

ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್‌ಗೆ ಎದುರಾಗಿ ದ್ವಿಚಕ್ರ ವಾಹನ ಸವಾರ ಬಂದಿದ್ದು, ಡಿಕ್ಕಿ ಹೊಡೆಯುವುದನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಬಸ್ ಚಾಲಕ ಬ್ರೇಕ್ ಹಾಕಿದಾಗ ಹಿಂಭಾಗದಲ್ಲಿ ಬರುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಅಲ್ಪ ಸ್ವಲ್ಪ ಗಾಯವಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಒಂದರ ಹಿಂದೆ ಒಂದು ಕಾರುಗಳು ತೆರಳುತ್ತಿದ್ದ ಕಾರಣ ಸರಣಿ ಅಪಘಾತ ಸಂಭವಿಸಿ ರಾತ್ರಿ ಸಂಚಾರ ಅಸ್ತವ್ಯಸ್ಥವಾಗಿತ್ತು. ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT