ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದ ಸಾಮಾಜಿಕ ಚಿಂತಕ ಎಸ್.ಕೆ. ರಾಜುಗೌಡ ಅವರು ‘ಸೇವಾ ಭೂಷಣ’ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.
ಎಸ್.ಕೆ.ರಾಜೂಗೌಡ ಅವರು ಸಕ್ರಿಯವಾಗಿ ಕನ್ನಡಪರ, ರೈತಪರ, ಶೋಷಿತರ ಪರ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗಾಗಿ ನಡೆದ ಹೋರಾಟ ಮತ್ತು ಕಾವೇರಿ ಹೋರಾಟ ಸೇರಿದಂತೆ ಸಾಮಾಜಿಕ, ಸಾಂಸ್ಕೃತಿಕ, ವೈಚಾರಿಕ ಮತ್ತು ವೈಜ್ಞಾನಿಕ, ಜನಪರ, ಸಂವಾದ ಮತ್ತು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ 13ನೇ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನಲ್ಲಿ ಸೆ.28 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.