ಮೈಸೂರು: ‘ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ನಗರ ಘಟಕದಿಂದ ‘ಶಕುಂತಲ ಜಯದೇವ ಶರಣ ಪ್ರಶಸ್ತಿ–2025’ ಪ್ರದಾನ ಸಮಾರಂಭವನ್ನು ಡಿ.27ರಂದು ಸಂಜೆ 5ಕ್ಕೆ ಇಲ್ಲಿನ ಜೆಎಸ್ಎಸ್ ಆಸ್ಪತ್ರೆ ಆವರಣದ ರಾಜೇಂದ್ರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಅಧ್ಯಕ್ಷ ಜಯಪ್ಪ ಹೊನ್ನಾಳಿ ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲಬುರಗಿಯ ಸಾಹಿತಿ ನೀಲಾಂಬಿಕಾ ಪೊಲೀಸ ಪಾಟೀಲ ಹಾಗೂ ಚಿಂತಕ ಶಂಕರ್ ದೇವನೂರು ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡುವರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ನಿವೃತ್ತ ಕುಲಪತಿ ಪ್ರೊ.ಪದ್ಮಾ ಶೇಖರ್ ಅಭಿನಂದನಾ ನುಡಿಗಳನ್ನಾಡುವರು. ದತ್ತಿ ದಾಸೋಹಿ ಶಕುಂತಲಾ ಜಯದೇವ ಪಾಲ್ಗೊಳ್ಳುವರು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.