ಮೈಸೂರು: ನಂಜನಗೂಡು ತಾಲ್ಲೂಕಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ನಡೆದ ಧನುರ್ಮಾಸ ಪೂಜೆಯಲ್ಲಿ ಮಹಿಷಾಸುರನಿಗೆ ಅವಮಾನ ಮಾಡಲಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿ ಮತ್ತು ದೇವಸ್ಥಾನ ಮಂಡಳಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಹಿಷ ದಸರಾ ಆಚರಣೆ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಒತ್ತಾಯಿಸಿದರು.

ಸಮಿತಿಯಿಂದ ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ರಾಕ್ಷಸ ಸಂಸ್ಕೃತಿಯನ್ನು ಸದಾ ಅಗೌರವಿಸುವ ಕೆಲಸ ಸುಡುವ ಸಂಸ್ಕೃತಿಯಿಂದ ಆಗುತ್ತಿದೆ. ನಂಜನಗೂಡು ದೇವಸ್ಥಾನ ಮಂಡಳಿಯಿಂದ ಆಚರಣೆ ಹೆಸರಲ್ಲಿ ರಾಕ್ಷಸರ ಚಿತ್ರಗಳನ್ನು ರಸ್ತೆ ಮೇಲೆ ರಂಗೋಲಿಯಂತೆ ಬಿಡಿಸಿ, ಭಾವಚಿತ್ರದ ಬ್ಯಾನರ್ ಹಾಸಿ ತುಳಿದುಹೋಗುವ ವಿಕೃತಿ ತೋರಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಜಾರಿಯಾಗಬೇಕು. ಅದನ್ನು ಬಹಿರಂಗಪಡಿಸದಿದ್ದರೆ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ. ಕಾಂತರಾಜ್ ವರದಿ ಜಾರಿ ಮಾಡುವ ಶಕ್ತಿ ಇದ್ದರೆ, ಅದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾತ್ರ. ಕೂಡಲೇ ಅದನ್ನು ಮಾಡಬೇಕು’ ಎಂದು ಒತ್ತಾಯಿಸಿದರು.

‘ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನ ಯಾತ್ರೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮುಸಲ್ಮಾನ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ. ಲೈಂಗಿಕವಾಗಿ ನಿಂದಿಸಿದ್ದಾರೆ. ಜನರನ್ನು ಪ್ರಚೋದಿಸಿದ್ದಾರೆ. ಅವರ ವಿರುದ್ಧ ಕ್ರಮವಾಗಲಿ’ ಎಂದು ಆಗ್ರಹಿಸಿದರು.

ಪ್ರೊ.ಮಹೇಶ್ ಚಂದ್ರಗುರು ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಮುಖಂಡ ಜವರಪ್ಪ, ಪತ್ರಕರ್ತ ಸೋಮಯ್ಯ ಮಲೆಯೂರು, ಲೇಖಕ ಸಿದ್ದಸ್ವಾಮಿ, ವಿ.ಸಿ.ನಾರಾಯಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.