ಶನಿವಾರ, ಏಪ್ರಿಲ್ 1, 2023
23 °C

ಸಿದ್ದರಾಮಯ್ಯ ಪಲಾಯನ ಮಾಡಿದ್ದೇಕೆ?: ವಿ. ಶ್ರೀನಿವಾಸ ಪ್ರಸಾದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಜನಗೂಡು (ಮೈಸೂರು ಜಿಲ್ಲೆ): ‘ಮುಂದಿನ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎನ್ನುವ ಸಿದ್ದರಾಮಯ್ಯ ಬೇರೆಡೆಗೆ ಪಲಾಯನ ಮಾಡಿದ್ದೇಕೆ’ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಪ್ರಶ್ನಿಸಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಚುನಾವಣೆಯಲ್ಲಿ ಬಾದಾಮಿಯಲ್ಲಿ ಅಲ್ಪ ಮತಗಳಿಂದ ಪ್ರಯಾಸದ ಗೆಲುವು ಪಡೆದಿದ್ದರು. ಚಾಮುಂಡೇಶ್ವರಿಯಲ್ಲಿ 35ಸಾವಿರ ಮತಗಳಿಂದ ಹೀನಾಯ ಸೋಲು ಕಂಡರು. ಮಾಜಿ ಮುಖ್ಯಮಂತ್ರಿಗೆ ತವರಲ್ಲಿ ಸ್ಪರ್ಧಿಸಲು ಕ್ಷೇತ್ರವಿಲ್ಲವೇ, ಜಿಲ್ಲೆಯ ಜನರ ಮೇಲೆ ವಿಶ್ವಾಸವಿಲ್ಲವೇ, ಚಾಮುಂಡೇಶ್ವರಿ ಅಥವಾ ವರುಣಾದಲ್ಲಿ ಗೆಲ್ಲಲಾಗೋಲ್ಲವೇ?’ ಎಂದು ವ್ಯಂಗ್ಯವಾಗಿ ಕೇಳಿದರು.

‘‌ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಗಂಟಲು ಜೋರಾಗಿತ್ತು. ನರೇಂದ್ರ ಮೋದಿ ಪ್ರಧಾನಿ ಆಗೋಲ್ಲ, ರಾಹುಲ್ ಗಾಂಧಿ ಆಗುತ್ತಾರೆ ಎಂದು ಅರಚುತ್ತಿದ್ದರು. ಫಲಿತಾಂಶ ಏನಾಯಿತು? ಸಿದ್ದರಾಮಯ್ಯಗೆ ಸ್ವಂತ ಜಿಲ್ಲೆಯಲ್ಲಿ ಸ್ಪರ್ಧಿಸಲು ಭಯ ಕಾಡುತ್ತಿದೆ’ ಎಂದು ಕುಟುಕಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು