ಸೋಮವಾರ, ಡಿಸೆಂಬರ್ 5, 2022
19 °C

ಮೇಯರ್‌ ಶಿವಕುಮಾರ್‌ಗೆ ಮಾತೃವಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಪಾಲಿಕೆ ಮೇಯರ್‌ ಶಿವಕುಮಾರ್‌ ಅವರ ತಾಯಿ ಸಿದ್ದಮ್ಮ (96) ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.‌

ಸಿದ್ದಮ್ಮ ಅವರಿಗೆ ಶಿವಕುಮಾರ್ ಸೇರಿದಂತೆ ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.

ಕುವೆಂಪುನಗರದ ಸಂಪಿಗೆ ರಸ್ತೆಯ 2ನೇ ಅಡ್ಡರಸ್ತೆಯ ನಿವಾಸಿಯಾಗಿದ್ದ ಅವರು, ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 15 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಾಮುಂಡಿಬೆಟ್ಟದ ತಪ‍್ಪಲಿನಲ್ಲಿರುವ ಸ್ಮಶಾನದಲ್ಲಿ ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.