ಮೈಸೂರು: ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ, ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುವ ಪರಿಸ್ಥಿತಿ ಬಂದಿದೆ’ ಎಂದು ಸಂಸದ ಪ್ರತಾಪ ಸಿಂಹ ಟೀಕಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಮುಂಬರುವ ಚುನಾವಣೆಯಲ್ಲಿ ಕೋಲಾರಕ್ಕೆ ಹೋಗಲೋ, ವರುಣಾಕ್ಕೆ ಬರಲೋ ಎಂಬ ಗೊಂದಲದಲ್ಲಿದ್ದಾರೆ. ವರುಣಾ ಕ್ಷೇತ್ರದ ಸಣ್ಣ ಸಣ್ಣ ಹಳ್ಳಿಗಳಿಗೂ ಏಕೆ ಭೇಟಿ ನೀಡುತ್ತಿದ್ದಾರೆ? ಗೆದ್ದು ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತಿರುವವರಿಗೆ ಕ್ಷೇತ್ರ ಹುಡುಕಾಡುವ ದೈನೇಸಿ ಸ್ಥಿತಿ ಬಂದಿದ್ದೇಕೆ? ಜನರ ವಿಶ್ವಾಸ ಉಳಿಸಿಕೊಂಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಮೊದಲು, ತಾವು ಸ್ಪರ್ಧಿಸುವ ಕ್ಷೇತ್ರ ಯಾವುದೆಂದು ಅವರು ಹೇಳಲಿ’ ಎಂದು ಸವಾಲೆಸೆದರು.
‘ನಾವು ಯಾವುದೇ ಪ್ರಚಾರ ಮಾಡದಿದ್ದರೂ, ಮನೆಯಲ್ಲೇ ಕುಳಿತಿದ್ದರೂ ಗೆಲ್ಲುತ್ತೇವೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ, ‘ವರುಣಾ ಬಿಟ್ಟು ಬೇರೆಲ್ಲಿಂದಾದರೂ ಸ್ಪರ್ಧಿಸಲಿ, ಮತ್ತೊಮ್ಮೆ ಬಾದಾಮಿಯಿಂದ ಸ್ಪರ್ಧಿಸಿ ಗೆಲ್ಲಲಿ ನೋಡೋಣ. ಪ್ರತಿ ಚುನಾವಣೆಯಲ್ಲೂ ಸುರಕ್ಷಿತ ಕ್ಷೇತ್ರಕ್ಕಾಗಿ ಹುಡುಕಾಡುವ ವ್ಯಕ್ತಿಯ ಮಾತಿಗೆ ಹೆಚ್ಚಿನ ಮನ್ನಣೆ ಕೊಡುವ ಅಗತ್ಯವಿಲ್ಲ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.