ಬೊಕ್ಕಹಳ್ಳಿ (ಮೈಸೂರು ಜಿಲ್ಲೆ): ‘ಬಿಜೆಪಿ–ಜೆಡಿಎಸ್‌ನವರು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಲಿತರಾಗಿಲ್ಲ. ಗುಂಡು ಕಲ್ಲಿನಂತಿದ್ದಾರೆ. ಹಿಂದೆ ಹೇಗಿದ್ದರೋ ಈಗಲೂ ಹಾಗೆಯೇ ಇದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ನೆರೆ ಹಾಗೂ ಅತಿವೃಷ್ಟಿಯಿಂದ ರಾಜ್ಯದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಪ್ರಜ್ಞೆ ಇರುವವರು ಜನರ ಕಷ್ಟದಲ್ಲಿ ಭಾಗಿಯಾಗಬೇಕು. ಆದರೆ, ವಿರೋಧ ಪಕ್ಷದವರು ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.
‘ಅವರನ್ನು ಜವಾಬ್ದಾರಿಯುತ ವಿರೋಧ ಪಕ್ಷದವರು ಎನ್ನಬೇಕೇ?’ ಎಂದು ಕೇಳಿದರು.