ಮೈಸೂರು: ‘ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

ಇಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾವು ಯುದ್ಧದ ಪರ ಇಲ್ಲ, ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆ ಹೆಚ್ಚಿಸಬೇಕು’ ಎಂದು ಹೇಳಿದರು.

‘ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆ ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಪ್ರವಾಸಿಗರು ಕೇಂದ್ರ ಸರ್ಕಾರದವರನ್ನು ನಂಬಿ ಹೋಗಿದ್ದರು. ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರು ಕುರಿತು ಪ್ರತಿಕ್ರಿಯಿಸಿ, ‘ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುತ್ತಿದ್ದಾರೆ’ ಎಂದು ಟೀಕಿಸಿದರು.

‘ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ’ ಎಂದರು.

ಪಾಕಿಸ್ತಾನದ 8 ಮಂದಿ ಮೈಸೂರಿನಲ್ಲಿ

ಮೈಸೂರು: ಜಿಲ್ಲೆಯಲ್ಲಿ ವಾಸವಿರುವ ಪಾಕಿಸ್ತಾನಿ ಪ್ರಜೆಗಳ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದು ಮೈಸೂರು ನಗರ ವ್ಯಾಪ್ತಿಯಲ್ಲಿ ಇಂತಹ ಎಂಟು ಮಂದಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ‘ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮತ್ತಷ್ಟು ಹುಡುಕಾಟ ನಡೆದಿದೆ. ನಗರದಲ್ಲಿ ಸದ್ಯ ಮೂವರು ಮಕ್ಕಳೂ ಸೇರಿ ಎಂಟು ಜನ ವಾಸವಿರುವ ಮಾಹಿತಿ ದೊರಕಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.