ಎಂಟು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ವಿವಿಧ ಭಾಗ್ಯ, ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುವುದು ಖಾತ್ರಿಯಾಗುತ್ತಿದ್ದಂತೆಯೇ ಗುರುವಾರ ಹುಟ್ಟೂರು ಮೈಸೂರು ಸಿದ್ದರಾಮನಹುಂಡಿಯಲ್ಲಿ ಗುರುವಾರ ಮೌನ ಆವರಿಸಿತ್ತು.

ಸಿದ್ದರಾಮಯ್ಯ ರಾಜೀನಾಮೆ ನೀಡಿದ ಸುದ್ದಿ ಕೇಳುತ್ತಿದ್ದಂತೆಯೇ ಜನ ಕಣ್ಣೀರಾದರು. ಹೈಕಮಾಂಡ್ ಕಠೋರ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ ಎಂಬ ಆಕ್ಷೇಪವನ್ನು ವ್ಯಕ್ತಪಡಿಸಿದರು. ಗ್ರಾಮದ ಯುವಜನರಲ್ಲಿ ಹೆಚ್ಚಿನವರು ಬೆಂಗಳೂರಿಗೆ ತೆರಳಿ ಸಿದ್ದರಾಮಯ್ಯ ಭೇಟಿಗೆ ಯತ್ನಿಸಿದರೆ, ಹಿರಿಯರು ಊರಿನಲ್ಲೇ ಉಳಿದು ತಮ್ಮ ನಾಯಕನ ಸಾಧನೆಗಳನ್ನು ಕೊಂಡಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.