ಮೈಸೂರು: ‘ಜಿಲ್ಲಾಡಳಿತದಿಂದ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ ರಾಜ್ಯಮಟ್ಟದ ಕಾರ್ಯಕ್ರಮವನ್ನು ಮೇ 6ರಂದು ಇಲ್ಲಿನ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈ ಬಾರಿಯದು ರಾಜ್ಯ ಮಟ್ಟದ ಕಾರ್ಯಕ್ರಮ ಆಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ. ಯಾವುದೇ ಲೋಪ ಆಗದಂತೆ ಅಚ್ಚುಕಟ್ಟಾಗಿ ಆಯೋಜಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಅಂದು ಬೆಳಿಗ್ಗೆ ಅರಮನೆ ಉತ್ತರ ದ್ವಾರದ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಕಲಾಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ ಮೆರುಗು ನೀಡಲಿವೆ. ವೇದಿಕೆ ಸಮಾರಂಭ ಮಧ್ಯಾಹ್ನ 12ಕ್ಕೆ ನಡೆಯಲಿದೆ. ಎಲ್ಲಾ ಜನಪ್ರತಿನಿಧಿಗಳನ್ನೂ ಆಹ್ವಾನಿಸಬೇಕು’ ಎಂದು ನಿರ್ದೇಶನ ನೀಡಿದರು.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಮಾತನಾಡಿ, ‘ಮೆರವಣಿಗೆಯಲ್ಲಿ ಭಾಗವಹಿಸುವ ಕಲಾತಂಡ ಹಾಗೂ ಕಲಾವಿದರಿಗೆ ಉಪಾಹಾರ, ಕುಡಿಯುವ ನೀರು ಒದಗಿಸಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮಹಾನಗರಪಾಲಿಕೆಯಿಂದ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಚಿತ್ರದುರ್ಗದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕಾರ್ಯಕ್ರಮಕ್ಕೂ ಮುನ್ನ ವಚನ ಗಾಯನ ಆಯೋಜಿಸಬೇಕು. ಭೋವಿ ಸಮುದಾಯದ ಮುಖಂಡರು ಒಳಗೊಂಡಂತೆ ವಿವಿಧ ಸಮಿತಿಗಳನ್ನು ರಚಿಸಿಕೊಂಡು, ರಾಜ್ಯದ ಎಲ್ಲಾ ಭಾಗಗಳಲ್ಲಿ ಪ್ರಚಾರ ನೀಡಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು’ ಎಂದರು.

ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಮು, ‘ಮೆರವಣಿಗೆಯಲ್ಲಿ ಮಹಿಳೆಯರು ಕುಂಭದೊಂದಿಗೆ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಬೇಕು’ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಎಚ್., ಭೋವಿ ಸಮುದಾಯದ ಮುಖಂಡರಾದ ವಿಜಯಕುಮಾರ್, ಟಿ. ಕೃಷ್ಣ, ದೇವರಾಜು, ಜಿ. ನಾಗರಾಜು, ಪಿ.ಎಲ್. ಚಿನ್ನಸ್ವಾಮಿ, ಬಿ.ವಿ ಶ್ರೀನಿವಾಸ್, ಮೋಹನ್ ಜಿ. ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.