ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಭಚಂದ್ರಗೆ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿ

Last Updated 11 ಮಾರ್ಚ್ 2023, 16:10 IST
ಅಕ್ಷರ ಗಾತ್ರ

ಮೈಸೂರು: ಶಿವಮೊಗ್ಗ ಜಿಲ್ಲೆಯ ಶ್ರೀಕ್ಷೇತ್ರ ಹೊಂಬುಜ ಜೈನ ಮಠದಿಂದ ಕೊಡಮಾಡುವ ಈ ವರ್ಷದ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಗೆ ಮೈಸೂರಿನ ಜೈನಶಾಸ್ತ್ರ ಮತ್ತು ‍ಪ್ರಾಕೃತ ವಿದ್ವಾಂಸ ಪ್ರೊ.ಶುಭಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 51ಸಾವಿರ ನಗದು, ಪ್ರಶಸ್ತಿಪತ್ರವನ್ನು ಒಳಗೊಂಡಿದೆ.

ಜೈನಶಾಸ್ತ್ರ, ಪ್ರಾಕೃತ, ಸಾಹಿತ್ಯ, ಸಂಸ್ಕೃತಿಗೆ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾರ್ಚ್‌ 14ರಂದು ಸಂಜೆ 6ಕ್ಕೆ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.

ಶುಭಚಂದ್ರ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ ಮತ್ತು ‍ಪ್ರಾಕೃತ ವಿಭಾಗದಲ್ಲಿ ಸಂಶೋಧಕ, ಬೋಧಕರಾಗಿ ಕಾರ್ಯನಿರ್ವಹಿಸಿ 2006ರಲ್ಲಿ ನಿವೃತ್ತರಾಗಿದ್ದಾರೆ. ಜೈನ ಸಾಹಿತ್ಯ ಮತ್ತು ಸಂಸ್ಕೃತಿ, ಪ್ರಾಕೃತ ಸಾಹಿತ್ಯ ಕೈಪಿಡಿ, ಅಹಿಂಸೆ, ಯಶೋಧರ ಚರಿತೆ ಅವರ ಪ್ರಮುಖ ಕೃತಿಗಳಾಗಿವೆ. ಹಲವು ಸಂಶೋಧನಾ ಲೇಖನಗಳನ್ನೂ ಬರೆದಿದ್ದಾರೆ. ಹಲವು ಪ್ರಶಸ್ತಿ–ಪುರಸ್ಕಾರಗಳಿಗೆ ಭಾಜನವಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT