ಮೈಸೂರು: ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದಿಂದ ಇಲ್ಲಿನ ದಸರಾ ವಸ್ತುಪ್ರದರ್ಶನದ ಆವರಣದಲ್ಲಿ ವಿನ್ಯಾಸಗೊಳಿಸಿರುವ ‘ಸಿದ್ಧಿ ಸಾಧಕ ಸಿದ್ದರಾಮಯ್ಯ- ನಮ್ಮ ಮುಖ್ಯಮಂತ್ರಿ’ ಛಾಯಾಂಕಣವನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ವಿವಿಧ ಮಜಲುಗಳನ್ನು ಬಿಂಬಿಸುವ ತಮ್ಮದೇ ಫೋಟೊಗಳ ಲೋಕವನ್ನು ವೀಕ್ಷಿಸಿ ಮುಖ್ಯಮಂತ್ರಿ ಖುಷಿಪಟ್ಟರು. ನೆನಪುಗಳಿಗೆ ಜಾರಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಟಿ.ಗುರುರಾಜ್ ಹಾಗೂ ರಂಗಕರ್ಮಿ ಜನಾರ್ಧನ್ (ಜನ್ನಿ), ಮುಖಂಡ ಹರೀಶ್ ಮೊಗಣ್ಣ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.