ಬೆಂಗಳೂರು: ಊಟಿಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ರಾಜ್ಯದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ತಂಡದೊಂದಿಗೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಅಭ್ಯರ್ಥಿ ಬೋಜರಾಜನ್ ಜತೆಗೂಡಿ ಉದಕಮಂಡಲ ವಿಧಾನಸಭಾ ಕ್ಷೇತ್ರದ ಹಳ್ಳಿಗಳಲ್ಲಿ ಮತ ಯಾಚಿಸುತ್ತಿದ್ದಾರೆ. ಬಿಷಪ್ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ. ಒಕ್ಕಲಿಗರ ಸಂಘ, ಟ್ರೇಡರ್ಸ್ ಅಸೋಸಿಯೇಷನ್, ಮಲೆಯಾಳಿ ಸಮುದಾಯವರನ್ನು ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿ ಗೆದ್ದರೆ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗಲಿದೆ ಎಂದು ಮನವೊಲಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

‘ಪ್ರವಾಸೋದ್ಯಮ ಹಾಗೂ ಸ್ಥಳೀಯರ ಹಿತದೃಷ್ಟಿಯಿಂದ ಯಾವ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂಬ ದೂರದೃಷ್ಟಿ ಬೋಜರಾಜನ್ ಅವರಿಗಿದೆ. ಹಾಲಿ ಶಾಸಕರು ಕೆಲಸ ಮಾಡಿಲ್ಲ ಎಂಬ ಆಕ್ರೋಶ ಜನರಲ್ಲಿದೆ. ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ನಿಶ್ಚಿತ’ ಎಂದು ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

‘ಕರ್ನಾಟಕ–ಊಟಿ ಅರಣ್ಯ ಭಾಗದಲ್ಲಿ ರಾತ್ರಿ 9ರ ಬಳಿಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿರುವುದರಿಂದ ತುರ್ತು ಮತ್ತು ವಿಶೇಷ ಸಂದರ್ಭಗಳಲ್ಲಿ ತೊಂದರೆ ಆಗುತ್ತಿರುವ ಬಗ್ಗೆ ಜನ ತಿಳಿಸಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಚುನಾವಣೆ ಮುಗಿದ ಬಳಿಕ ಇಲ್ಲಿನ ಮುಖಂಡರ ನಿಯೋಗವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿಗೆ ಕರೆದೊಯ್ದು ಚರ್ಚಿಸಲಾಗುವುದು’ ಎಂದು ತಿಳಿಸಿದರು.

ಬಿಜೆಪಿ ಮೈಸೂರು ನಗರ ಘಟಕದ ಅಧ್ಯಕ್ಷ ಶ್ರೀವತ್ಸ ಹಾಗೂ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಜೊತೆಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.