ಮೈಸೂರು: ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಆವರಣದಲ್ಲಿ 4 ಎಕರೆ 2 ಗುಂಟೆ ಜಮೀನು ನೀಡಲು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ಶುಕ್ರವಾರ ಅನುಮೋದನೆ ನೀಡಿದೆ.

‘ಜಾಗ ನೀಡುವ ಕುರಿತು ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗುವುದು’ ಎಂದು ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ತಿಳಿಸಿದರು.

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಪ್ರಸ್ತುತ ಭಾರತೀಯ ಭಾಷಾ ಸಂಸ್ಥಾನದ ಅಧೀನದಲ್ಲೇ ಕಾರ್ಯ ನಿರ್ವಹಿಸುತ್ತಿದೆ. ಈ ಹಿಂದೆ, ಮಾನಸ ಗಂಗೋತ್ರಿಯ ಆವರಣದಲ್ಲಿರುವ 400X325 ಅಡಿ ಅಳತೆಯ ಕಟ್ಟಡ ಹಾಗೂ 3 ಎಕರೆ ಜಾಗವನ್ನು ಶಾಸ್ತ್ರೀಯ ಕನ್ನಡ ಕೇಂದ್ರಕ್ಕೆ ನೀಡಲಾಗಿತ್ತು. ಆದರೆ, ಆನಂತರದ ಬೆಳವಣಿಗೆಯಲ್ಲಿ ಈ ಜಾಗವನ್ನು ಹಿಂಪಡೆಯಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.