ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸಮಾವೇಶ: ಬಿಎಸ್‌ವೈ ಆಹ್ವಾನ ನಯವಾಗಿ ತಿರಸ್ಕರಿಸಿದ ಶ್ರೀನಿವಾಸ ಪ್ರಸಾದ್

Published 14 ಏಪ್ರಿಲ್ 2024, 10:10 IST
Last Updated 14 ಏಪ್ರಿಲ್ 2024, 10:10 IST
ಅಕ್ಷರ ಗಾತ್ರ

ಮೈಸೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಇಲ್ಲಿನ ಜಯಲಕ್ಷ್ಮಿಪುರಂನ ನಿವಾಸದಲ್ಲಿ ಭಾನುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ಆಯೋಜಿಸಿರುವ ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಬರುವಂತೆ ನೀಡಿದ ಆಹ್ವಾನವನ್ನು ನಿಯವಾಗಿ ತಿರಸ್ಕರಿಸಿದರು. ‘ಆಗುವುದಿಲ್ಲ, ಆರೋಗ್ಯ ಸ್ಪಂದಿಸುವುದಿಲ್ಲ’ ಎಂದು ಕೈಮುಗಿದು ಹೇಳಿಕೊಂಡರು.

‘ನಾನು ಬಿಜೆಪಿಯಿಂದಲೇ ನಿವೃತ್ತಿ ಆಗಿದ್ದೇನೆ. ಹೋದ ತಿಂಗಳು ದೊಡ್ಡ ಕಾರ್ಯಕ್ರಮ ಮಾಡಿ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದೇನೆ. ಯಾವುದೇ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ’ ಎಂದು ತಿಳಿಸಿದರು.

‘ಬಹಳಷ್ಟು ಚುನಾವಣೆ ಎದುರಿಸಿದ್ದೇನೆ. ಸಾಕಾಗಿದೆ. ಜರ್ಜರಿತನಾಗಿದ್ದೇನೆ. ಆರೋಗ್ಯವೂ ಸರಿ ಇಲ್ಲ. ಸ್ವಲ್ಪ ದೂರವೂ ನಡೆಯಲಾಗುವುದಿಲ್ಲ. ನಿಮ್ಮ ಮೇಲೆ ಗೌರವವಿದೆ. ನೀವು ಬಂದಿದ್ದು ಬಹಳ ಸಂತೋಷವಾಯಿತು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT